ನವದೆಹಲಿ: ಕಳೆದ 24 ಗಂಟೆಯಲ್ಲಿ 67,708 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, 680 ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆ 73,07,098ಕ್ಕೆ ಏರಿಕೆಯಾಗಿದ್ದು, 8,12,390 ಸಕ್ರಿಯ ಪ್ರಕರಣಗಳಿವೆ. ಇದವರೆಗೂ 63,83,442 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 1,11,266 ಸೋಂಕಿತರು ಸಾವನ್ನಪ್ಪಿದ್ದಾರೆ.
Advertisement
Advertisement
ಅಕ್ಟೋಬರ್ 14ರವರೆಗೆ ದೇಶದಲ್ಲಿ 9,12,26,305 ಸ್ಯಾಂಪಲ್ ಗಳನ್ನು ಕೊರೊನಾ ಟೆಸ್ಟ್ ಮಾಡಲಾಗಿದೆ. ದೇಶದಾದ್ಯಂತ ನಿನ್ನೆ ಒಂದೇ ದಿನ 11,36,183 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಮಹಾರಾಷ್ಟ್ರ, ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದಲ್ಲಿ ಕೊರೊನಾ ಪೀಡಿತ ಟಾಪ್ 5 ರಾಜ್ಯಗಳಾಗಿವೆ.
Advertisement
11,36,183 samples were tested for #COVID19 yesterday. Total 9,12,26,305 samples tested in the country up to October 14: Indian Council of Medical Research (ICMR) pic.twitter.com/oziYR59z9l
— ANI (@ANI) October 15, 2020
Advertisement
ಬುಧವಾರ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆರೋಗ್ಯ ಸ್ಥಿರವಾಗಿದ್ದು, ಗುರುಗ್ರಾಮದ ಮೆದಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಪುತ್ರ, ಮಾಜಿ ಸಿಎಂ ಅಖಿಲೇಶ್ ಯಾದವ್ ಮಾಹಿತಿ ನೀಡಿದ್ದಾರೆ.
India reports a spike of 67,708 new #COVID19 cases & 680 deaths in the last 24 hours.
Total case tally stands at 73,07,098 including 8,12,390 active cases, 63,83,442 cured/discharged/migrated cases & 1,11,266 deaths: Ministry of Health and Family Welfare pic.twitter.com/a3tEOsM8Zs
— ANI (@ANI) October 15, 2020