ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ತಾಂಡವಾಡುತ್ತಿದ್ದು, ಹತೋಟಿಗೆ ತರಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ. ಇದರ ಭಾಗವಾಗಿ ಮೇ ತಿಂಗಳಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಹೀಗಿರುವಾಗಲೇ ದೇಶೀಯ ಕೊರೊನಾ ಲಸಿಕೆ ಕೋವ್ಯಾಕ್ಸಿನ್ಗೆ ದರ ನಿಗದಿಪಡಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,200 ರೂ. ದರ ನಿಗದಿಪಡಿಸಲಾಗಿದೆ.
Advertisement
ಈ ಕುರಿತು ಹೈದರಾಬಾದ್ ಮೂಲದ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಸಂಸ್ಥೆ ಭಾರತ್ ಬಯೋಟೆಕ್ ಅಧಿಕೃತ ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರದ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ಗೆ 600 ರೂ., ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ ಕೋವ್ಯಾಕ್ಸಿನ್ ಬೆಲೆಯನ್ನು 1,200 ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರಕ್ಕೂ ಸಂಸ್ಥೆ ಲಸಿಕೆಯನ್ನು ಒದಗಿಸಲಿದೆ.
Advertisement
Advertisement
ಈ ಹಿಂದೆ ಸೀರಂ ಸಂಸ್ಥೆ ಖಾಸಗಿ ಆಸ್ಪತ್ರೆ ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವ ಕೊರೊನಾ ಲಸಿಕೆ ಕೋವಿಶೀಲ್ಡ್ ಬೆಲೆಯನ್ನ ಘೋಷಣೆ ಮಾಡಿಕೊಂಡಿತ್ತು. ಪ್ರತಿ ಡೋಸ್ಗೆ ರಾಜ್ಯ ಸರ್ಕಾರಕ್ಕೆ 400 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ 600 ರೂ. ನಿಗದಿ ಮಾಡಿತ್ತು. ವ್ಯಾಕ್ಸಿನ್ ಅಭಿಯಾನದ ನೂತನ ಹಂತದಲ್ಲಿ ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಕಂಪನಿಗಳು ನೇರವಾಗಿ ಲಸಿಕೆಯನ್ನ ಉತ್ಪಾದಕರಿಂದ ಖರೀದಿಸಲು ಅನುಮತಿ ಕಲ್ಪಿಸಲಾಗಿತ್ತು. ಇದೀಗ ಕೋವ್ಯಾಕ್ಸಿನ್ ಬೆಲೆಯನ್ನು ಸಹ ನಿಗದಿಪಡಿಸಲಾಗಿದೆ.