ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ದೋಣಿ ದುರಂತಕ್ಕೆ ಸಂಬಂಧಿಸಿ ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸದನದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ 25 ಜನರಿದ್ದ ಶ್ರೀರಕ್ಷಾ ಹೆಸರಿನ ದೋಣಿ ಮುಳುಗಡೆಯಾಗಿ 19 ಜನರು ಪ್ರಾಣಾಪಾಯದಿಂದ ಪಾರಾಗಿ 6 ಜನರು ಮೃತಪಟ್ಟಿದ್ದರು. ಈ ಘಟನೆಯ ಕುರಿತು ಸದನದಲ್ಲಿ ಮಾತನಾಡಿದ ಶಾಸಕ ಕಾಮತ್ 6 ಜನರಲ್ಲಿ ಒಬ್ಬರ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ಮೃತದೇಹದ ಶೋಧ ಕಾರ್ಯ ನಡೆಯುತ್ತಿದೆ ಎಂದರು.
Advertisement
Advertisement
ಈಗಾಗಲೇ ಮೀನುಗಾರಿಕಾ ಇಲಾಖೆಯು ಮೃತರ ಕುಟುಂಬಗಳಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ಧನವನ್ನು ಸಂಸದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನೀಡಲಾಗಿದೆ. ಬೇರೆಡೆಗಳಲ್ಲಿ ಸಂಭವಿಸಿದ ದೋಣಿ ದುರಂತ ಘಟನೆಗಳಲ್ಲಿ 10 ಲಕ್ಷದ ವರೆಗೆ ಪರಿಹಾರ ನೀಡಲಾಗಿದೆ. ಹಾಗಾಗಿ ಸರ್ಕಾರವು ಮುತುವರ್ಜಿ ವಹಿಸಿ ಹೆಚ್ಚಿನ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡರು.
Advertisement
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್, ಮೀನುಗಾರಿಕಾ ಸಚಿವರು ಹಾಗೂ ಸರ್ಕಾರದ ಜೊತೆ ಈ ಕುರಿತು ಚರ್ಚಿಸಲಾಗುವುದು ಎಂದರು.