ಮಂಗಳೂರು: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಂಗಳವಾರ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿ ಮೂಲಕ ಧರ್ಮೋಪದೇಶ ನೀಡುವ ಧಾರ್ಮಿಕ ಸಭೆಗೆ ‘ಸಮವಸರಣ’ ಎನ್ನುತ್ತಾರೆ. ಇಲ್ಲಿ ಸಕಲ ಪ್ರಾಣಿ, ಪಕ್ಷಿಗಳಿಗೂ, ಸರ್ವಧರ್ಮೀಯರಿಗೂ ಅವರವರ ಭಾಷೆಯಲ್ಲಿ ಧರ್ಮೋಪದೇಶ ಕೇಳುವ ಅವಕಾಶವಿದೆ. ಜೈನರ ಆರಾಧನಾ ಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ.
Advertisement
ಶಿಶಿರ್ ಇಂದ್ರರ ನೇತೃತ್ವದಲ್ಲಿ ಅಷ್ಟವಿಧಾರ್ಚನೆ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಭಜನೆ, ಸ್ತೋತ್ರ ಮತ್ತು ಪೂಜಾಮಂತ್ರ ಪಠಣ ಮಾಡಿದರು.
Advertisement
Advertisement
ಎಸ್.ಡಿ.ಎಂ.ತಂಡದ ತೃಪ್ತಜೈನ್, ಸುಮನ್ ಜೈನ್, ಸಮ್ಯಕ್ ಜೈನ್, ರಂಜಿತ್ ಮತ್ತು ವಿನ್ಯಾಸ್ ಜೈನ್ ಬಳಗದವರು ಸುಶ್ರಾವ್ಯವಾಗಿ ಜಿನ ಭಜನೆಗಳನ್ನು ಹಾಡಿದರು. ಶ್ರೀ ಬಾಹುಬಲಿ ಸೇವಾ ಸಮಿತಿಯ ಸರ್ವ ಸದಸ್ಯರು ಸಹಕರಿಸಿದರು.
Advertisement
ಮಹಾಮಂಗಳಾರತಿ ಮತ್ತು ಶಾಂತಿಮಂತ್ರ ಪಠಣದೊಂದಿಗೆಕಾರ್ಯಕ್ರಮ ಮುಕ್ತಾಯಗೊಂಡಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ. ಬಿ. ಯಶೋವರ್ಮ, ಶ್ರದ್ಧಾ ಅಮಿತ್, ಶುೃತ, ಮೈತ್ರಿ, ಡಿ. ಶ್ರೇಯಸ್ ಕುಮಾರ್, ಡಿ. ನಿಶ್ಚಲ್ ಕುಮಾರ್ ಮತ್ತು ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು. ಉಜಿರೆಯ ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.