ಮಂಗಳೂರು: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಶ್ರೀಮಂಜುನಾಥ ದೇವರ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಆರಂಭಗೊಂಡಿದ್ದು ಶ್ರೀಕ್ಷೇತ್ರ ಆಕರ್ಷಕವಾಗಿ ಕಂಗೊಳಿಸುತ್ತಿದೆ.
Advertisement
ದೀಪೋತ್ಸವದ ಅಂಗವಾಗಿ ಇಡೀ ಧರ್ಮಸ್ಥಳವೇ ವಿದ್ಯುದೀಪಗಳಿಂದ ಶೃಂಗಾರಗೊಂಡಿದ್ದು, ಭಕ್ತರನ್ನು ಕೈಬೀಸಿ ಕರೆಯುತ್ತಿದೆ. ದೇವಸ್ಥಾನ, ಹೆಗ್ಗಡೆಯವರ ಬೀಡಿನ ಮನೆ, ಪ್ರವೇಶ ದ್ವಾರ, ಉದ್ಯಾನ, ವಸತಿ ಛತ್ರಗಳು,ಬಾಹುಬಲಿ ಬೆಟ್ಟ ಸೇರಿದಂತೆ ಎಲ್ಲೆಡೆ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
Advertisement
Advertisement
ಡಿ.14ರ ಸೋಮವಾರ ರಾತ್ರಿ ಶ್ರೀಮಂಜುನಾಥ ಸ್ವಾಮಿಗೆ ಲಕ್ಷ ದೀಪೋತ್ಸವದ ವಿಶೇಷ ಪೂಜೆ ನಡೆಯಲಿದೆ. ದೀಪೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳವೂ ಪ್ರತೀ ವರ್ಷದಂತೆ ನಡೆಯಲಿದ್ದು, ಈ ಬಾರಿ ವಸ್ತು ಪ್ರದರ್ಶನವನ್ನು ರದ್ದು ಪಡಿಸಲಾಗಿದೆ. ಉಳಿದಂತೆ ಎಲ್ಲಾ ಕಾರ್ಯಕ್ರಮಗಳೂ ಕೋವಿಡ್ ನಿಯಮದಂತೆ ನಡೆಯಲಿದೆ.