ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕೊರೊನಾ ಅನ್ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 06 ಗಂಟೆಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
Advertisement
Advertisement
ಭಾನುವಾರ ವೀಕೆಂಡ್ ಆದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಆಗಮಿಸಿದ್ದಾರೆ. ಆದರೆ ಅನ್ಲಾಕ್ ಆದ ಬಳಿಕ ಬೆಳಗ್ಗೆ 8 ಗಂಟೆಗೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ ಬೆಳ್ಳಂಬೆಳಗ್ಗ ಸೂರ್ಯೋದಯದ ಸವಿ ಸವಿಯೋಕೆ ಅಂತ ಮುಂಜಾನೆ 4-5 ಗಂಟೆಗೆ ಬಂದ ಪ್ರವಾಸಿಗರನ್ನ ಚೆಕ್ ಪೋಸ್ಟ್ ಬಳಿಯೇ ತಡೆಯಲಾಗಿತ್ತು. ಇದರಿಂದ ಕಿಲೋಮೀಟರ್ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರು ಪರದಾಡಿದ್ದರು.
Advertisement
ನಂದಿಗಿರಿಧಾಮ ದಲ್ಲಿ ನಾಳೆಯಿಂದ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಸಾರ್ವಜನಿಕರಿಗೆ ಪ್ರವೇಶವಿರುತ್ತದೆ. ಸಾರ್ವಜನಿಕರು ಕೋರೋನ ತಡೆಗಟ್ಟುವ ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ. @dc_ckbpur
— Chikkaballapura District Police (@spcbpura) October 4, 2020
Advertisement
ಈ ಸುದ್ದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು. ತಕ್ಷಣ ಎಚ್ಚೆತ್ತ ಇಲಾಖೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಮಯ ಬದಲಾವಣೆ ಮಾಡಿದ್ದು, ಪ್ರವಾಸಿಗರಿಗೆ ಬೆಳಗ್ಗೆ 6 ರಿಂದಲೇ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.