– ಲಾರಿ, ಬಸ್ ನಡುವೆ ಡಿಕ್ಕಿ 8 ಸಾವು, 50 ಮಂದಿಗೆ ಗಾಯ
ಲಕ್ನೋ: ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಟ್ಟು 14 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ, 50 ಮಂದಿ ಗಾಯಗೊಂಡಿದ್ದಾರೆ.
Madhya Pradesh: 8 labourers dead & around 50 injured after the truck they were travelling in, collided with a bus in Cantt PS area in Guna last night. Injured persons shifted to district hospital.All the 8 killed labourers were going to their native places in UP from Maharashtra. pic.twitter.com/OaB9SCLpjY
— ANI (@ANI) May 14, 2020
Advertisement
ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಕಾರ್ಮಿಕರು ತಮ್ಮ ಊರಿಗೆ ಹೋಗಿ ಅಲ್ಲಿಯಾದರೂ ಬದುಕೋಣ ಎಂದು ಹೊರಟಿದ್ದರು. ಬಸ್ ಅಥವಾ ಯಾವುದೇ ಸಾರಿಗೆ ವ್ಯವಸ್ಥೆ ಸಿಗದ ಕಾಣರಕ್ಕೆ ನಡೆದುಕೊಂಡು ಊರಿನತ್ತ ಪ್ರಯಣ ಬೆಳೆಸಿದ್ದರು. ಉತ್ತರ ಪ್ರದೇಶ ಮುಜಾಫರ್ನಗರ-ಸಹರನ್ಪುರ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಘಲೌಲಿ ಚೆಕ್ಪೋಸ್ಟ್ ಬಳಿ 6 ಮಂದಿ ವಲಸೆ ಕಾರ್ಮಿಕರು ನಡೆದು ಬರುತ್ತಿದ್ದರು. ಈ ವೇಳೆ ಚೆಕ್ಪೋಸ್ಟ್ ಬಳಿ ವೇಗವಾಗಿ ಬರುತ್ತಿದ್ದ ಬಸ್ಸೊಂದು ಕಾರ್ಮಿಕರ ಮೇಲೆ ಹರಿದು ಹೋಗಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.
Advertisement
6 migrant workers who were walking along the Muzaffarnagar-Saharanpur highway killed after a speeding bus ran over them late last night, near Ghalauli check-post. Case registered against unknown bus driver. pic.twitter.com/s81e7gpYkH
— ANI UP/Uttarakhand (@ANINewsUP) May 14, 2020
Advertisement
ಇತ್ತ ಮಧ್ಯಪ್ರದೇಶದ ಗುಣದಲ್ಲಿ ಬುಧವಾರ ರಾತ್ರಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಲಾರಿ ಹಾಗೂ ಬಸ್ಸೊಂದರ ನಡುವೆ ಡಿಕ್ಕಿ ಆಗಿ ಅಪಘಾತಕ್ಕಿಡಾಗಿದೆ. ಈ ಅಪಘಾತದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ 8 ಮಂದಿ ಉತ್ತರ ಪ್ರದೇಶದವರಾಗಿದ್ದು, ಕೆಲಸ ಅರಸಿ ಮಹಾರಾಷ್ಟ್ರಕ್ಕೆ ಬಂದಿದ್ದರು. ಆದರೆ ಲಾಕ್ಡೌನ್ ಪರಿಣಾಮ ಕೆಲಸವಿಲ್ಲದೆ ಕಷ್ಟದಲ್ಲಿದ್ದ ಕಾರ್ಮಿಕರು ತಮ್ಮೂರಿಗೆ ವಾಪಸ್ ತೆರೆಳುತ್ತಿದ್ದರು. ಈ ವೇಳೆ ಗುಣದಲ್ಲಿ ಈ ದುರಂತ ಸಂಭವಿಸಿದೆ.