ನವದೆಹಲಿ: ಪಕ್ಷ ನಿಷ್ಠೆಯ ಬಗ್ಗೆ ಮಾತನಾಡಿದ್ದಕ್ಕೆ ಬಹಿರಂಗವಾಗಿಯೇ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಹಿರಿಯ ಮುಖಂಡ, ವಕೀಲ ಕಪಿಲ್ ಸಿಬಲ್ ಇಂದು ಮತ್ತೊಂದು ಟ್ವೀಟ್ ಮಾಡಿ ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ.
ನನಗೆ ಪದವಿ ಮುಖ್ಯ ಅಲ್ಲ. ದೇಶ ಮುಖ್ಯ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ನಲ್ಲಿ ಯಾರ ಹೆಸರನ್ನು ಮತ್ತು ಯಾವುದೇ ವಿಚಾರವನ್ನು ಸ್ಪಷ್ಟವಾಗಿ ತಿಳಿಸಿಲ್ಲ.
Advertisement
Advertisement
ಸಭೆ ಏನಾಗಿತ್ತು?
ಸೋಮವಾರ ನಡೆದ ಸಭೆಯಲ್ಲಿ 23 ನಾಯಕರು ಬರೆದ ಪತ್ರಕ್ಕೆ ರಾಹುಲ್ ಗಾಂಧಿ ಸಿಟ್ಟಾಗಿದ್ದರು. ಅಷ್ಟೇ ಅಲ್ಲದೇ ನಾಯಕರು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
Advertisement
Advertisement
ಈ ಆರೋಪಕ್ಕೆ ಸಿಬಲ್, ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಆದರೆ ನಾವು ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿ ಪರವಾಗಿ ಹೇಳಿಕೆ ನೀಡಿಲ್ಲ. ರಾಜಸ್ಥಾನ ಹೈಕೋರ್ಟ್ನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾದೆ. ಬಿಜೆಪಿ ಸರ್ಕಾರವನ್ನು ಉರುಳಿಸಿ ಮಣಿಪುರದಲ್ಲಿ ಹಾಲಿ ಪಕ್ಷವನ್ನು ತರುವಲ್ಲಿ ನೆರವಾದೆ. ಆದರೂ ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.
Was informed by Rahul Gandhi personally that he never said what was attributed to him .
I therefore withdraw my tweet .
— Kapil Sibal (@KapilSibal) August 24, 2020
ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ರಾಹುಲ್ ಗಾಂಧಿ ಕಪಿಲ್ ಸಿಬಲ್ ಜೊತೆ ಕರೆ ಮಾಡಿ ಮಾತನಾಡಿದ್ದರು. ಬಳಿಕ ಕಪಿಲ್ ಸಿಬಲ್ ಯೂಟರ್ನ್ ಹೊಡೆದಿದ್ದರು. ರಾಹುಲ್ ಗಾಂಧಿ ನನಗೆ ಜೊತೆ ಮಾತನಾಡಿ ನಿಮ್ಮನ್ನು ಉದ್ದೇಶಿಸಿ ಹೇಳಿಲ್ಲ ಎಂದು ಹೇಳಿದರು. ಹೀಗಾಗಿ ನನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ ಎಂದು ಹೇಳಿ ಮೊದಲು ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿದ್ದರು.