ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಳಿನ್ ಕುಮಾರ್ ಕಟೀಲ್ ಕಳೆದ ನಾಲ್ಕು ದಿನಗಳಿಂದಲೂ ಜಿಲ್ಲಾ ಪ್ರವಾಸದಲ್ಲಿದ್ದರು. ಮಂಗಳೂರು, ಯಾದಗಿರಿ, ಬೀದರ್, ಗುಲರ್ಗಾ ಜಿಲೆಗಳಲ್ಲಿ ಹಲವು ಸಭೆಗಳನ್ನು ನಡೆಸಿದ್ದರು. ಶನಿವಾರ ಕಟೀಲ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಕಟೀಲ್ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಇಂದು ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
Advertisement
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.
— Nalinkumar Kateel (@nalinkateel) August 30, 2020
Advertisement
ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ತಮಗೆ ಕೊರೊನಾ ಪಾಸಿಟಿವ್ ಆಗಿರುವುದನ್ನು ತಿಳಿಸಿದ್ದಾರೆ. “ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ” ಎಂದು ನಳಿನ್ ಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.
Advertisement
ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಆತ್ಮೀಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಸಂಘಟನೆಯ ಕಾರ್ಯಗಳಲ್ಲಿ ನಿರತರಾಗಲಿ, ಪಕ್ಷವನ್ನು ಮುನ್ನಡೆಸಲಿ ಎಂದು ಹಾರೈಸುತ್ತೇನೆ.https://t.co/E5Mepd9H05
— B.S.Yediyurappa (@BSYBJP) August 30, 2020
Advertisement
ನಳಿನ್ ಕುಮಾರ್ ಶೀಘ್ರವೇ ಗುಣಮುಖರಾಗಿ ಬರಲಿ ಎಂದು ಸಿಎಂ, ಸಚಿವ ಸುಧಾಕರ್ ಸೇರಿದಂತೆ ಪಕ್ಷದ ಅನೇಕ ನಾಯಕರು ಶುಭ ಹಾರೈಸುತ್ತಿದ್ದಾರೆ. “ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಆತ್ಮೀಯರೂ ಆದ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಸಂಘಟನೆಯ ಕಾರ್ಯಗಳಲ್ಲಿ ನಿರತರಾಗಲಿ, ಪಕ್ಷವನ್ನು ಮುನ್ನಡೆಸಲಿ” ಎಂದು ಸಿಎಂ ಯಡಿಯೂರಪ್ಪ ಹಾರೈಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕಟೀಲ್ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.@nalinkateelhttps://t.co/puiDsfXF8c
— Dr Sudhakar K (@mla_sudhakar) August 30, 2020
ಇತ್ತೀಚಿನ ದಿನಗಳಲ್ಲಿ ಅನೇಕ ರಾಜಕಾರಣಿಗಳಿಗೆ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಕೋವಿಡ್ ಕಾಣಿಸಿಕೊಂಡಿತ್ತು. ನಂತರ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.