CrimeLatestMain PostNational

ನವ ವಿವಾಹಿತ ಅಪಘಾತದಲ್ಲಿ ಸಾವು- ಗರ್ಭಿಣಿ ಪತ್ನಿಯ ಕಣ್ಣೀರು

ಹೈದರಾಬಾದ್: ಒಂಬತ್ತು ತಿಂಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಕೊಮರುಡಾ ಮುಂಡಲದ ಕುಮ್ಮರಿಗುಂಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.

27 ವರ್ಷದ ಪ್ರವೀಣ್ ಅಪಘಾತದಲ್ಲಿ ಮೃತ ಯುವಕ. ಪ್ರವೀಣ್ ತರಕಾರಿ ಮಾರಿ ಜೀವನ ನಡೆಸುತ್ತಿದ್ದರು. ಮೃತ ಪ್ರವೀಣ್ ಫೆಬ್ರವರಿ 2020ರಲ್ಲಿ ರೋಜಾಳನ್ನು ವಿವಾಹವಾಗಿದ್ದರು. ಮದುವೆಯಾಗಿ ಕೇವಲ ಒಂಬತ್ತು ತಿಂಗಳಿಗೆ ಪ್ರವೀಣ್ ಸಾವನ್ನಪ್ಪಿದ್ದಾರೆ.

ಪ್ರವೀಣ್ ಬೆಳಗ್ಗೆ 7 ಗಂಟೆ ಸುಮಾರಿಗೆ ಬೊಲೆರೊ ವಾಹನದಲ್ಲಿ ತರಕಾರಿ ತರಲು ಬೊಬ್ಬಿಲಿ ಮಾರುಕಟ್ಟೆಗೆ ಹೊರಟಿದ್ದರು. ಈ ವೇಳೆ ಬೊಲೆರೊ ರಸ್ತೆಯಲ್ಲಿ ನಿಲ್ಲಿಸಿದ ಲಾರಿಗೆ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ ಪ್ರವೀಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಪ್ರವೀಣ್ ಪತ್ನಿ 6 ತಿಂಗಳ ಗರ್ಭಿಣಿಯಾಗಿದ್ದಳು. ಮಗನನ್ನು ಕಳೆದುಕೊಂಡ ಪೋಷಕರು, ಪತಿಯನ್ನು ಕಳೆದುಕೊಂಡ ಪತ್ನಿ, ಪ್ರವೀಣ್‍ನ ಇಡೀ ಕುಟುಂಬವೇ ದುಖಃದಲ್ಲಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮತ್ತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published.

Back to top button