ಗದಗ: ನಾಳೆಯಿಂದ 5 ದಿನ ಜಿಲ್ಲೆಯಾದ್ಯಂತ ಲಾಕ್ಡೌನ್ ಜಾರಿಗೊಳಿಸಿರುವ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗಾಗಿ ಮುಗಿಬಿದ್ದಿದ್ದರು.
ಜಿಲೆಯಾದ್ಯಂತ ಮತ್ತೆ ಜೂನ್ 7ರ ವರೆಗೆ ಸಂಪೂರ್ಣ ಕಠಿಣ ಲಾಕ್ಡೌನ್ ಘೋಷಿಸಲಾಗಿದೆ. ಹೀಗಾಗಿ ಜನರಿಗೆ ಇಂದು ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ, ಜನ ಮಾತ್ರ ಎಷ್ಟೇ ಹೇಳಿದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮೈ ಮರೆತು ಓಡಾಡಿದ್ದರು.
Advertisement
Advertisement
ನಗರದ ನಾಮ ಜೋಶಿ ರೋಡ್, ಗ್ರೀನ್ ಮಾರ್ಕೆಟ್, ಬ್ಯಾಂಕ್ ರೋಡ್, ಪಟೇಲ್ ರೋಡ್, ನಾನ್ ವೆಜ್ ಮಾರ್ಕೆಟ್ನಲ್ಲಿ ಜನ ಜಂಗುಳಿಯೇ ತುಂಬಿತ್ತು. ಇಲ್ಲಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿರುವ ಜನರು ಮಾಸ್ಕ್ ಇಲ್ಲದೇ, ಸಾಮಾಜಿಕ ಅಂತರ ಮರೆತು ಅಗತ್ಯ ವಸ್ತುಗಳನ್ನು ಖರೀದಿಸಲು ಮುಂದಾಗಿದ್ದರು.
Advertisement
Advertisement
ಗದಗ- ಬೆಟಗೇರಿ ಅವಳಿ ನಗರದ ಜನರು ಸೇರಿದಂತೆ ಗ್ರಾಮೀಣ ಭಾಗದ ಜನರು ಕೂಡ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರು. ಹೀಗಾಗಿ ಮಾರುಕಟ್ಟೆಗಳು ಜನ ಜಾತ್ರೆಯಂತಾಗಿತ್ತು. ಬಹುತೇಕರು ಮಾಸ್ಕ್ಗಳನ್ನೇ ಹಾಕಿಕೊಂಡು ಬಂದಿರಲಿಲ್ಲ. ಇನ್ನು ಕೆಲವರು ನಾಮಕಾವಸ್ತೆಗೆ ಮಾಸ್ಕ್ ಹಾಕಿಕೊಂಡಿದ್ದರು. ಸಾಮಾಜಿಕ ಅಂತರವಂತೂ ಅವರಿಗೆ ಸಂಬಂಧವೇ ಇಲ್ಲ ಎಂಬಂತೆ ವರ್ತಿಸಿದ್ದರು.
ಸರ್ಕಾರ ಹಾಗೂ ಜಿಲ್ಲಾಡಳಿತ ಹಲವು ಕಾರ್ಯಕ್ರಮಗಳ ಮೂಲಕ ಹಾಗೂ ಲಾಕ್ಡೌನ್ ಮೂಲಕ ಜನರಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಿದರೂ ಜನರು ಮಾತ್ರ ಸುಧಾರಿಸುತ್ತಿಲ್ಲ. ಅಧಿಕಾರಿಗಳು ಎಷ್ಟೇ ಬುದ್ಧಿ ಹೇಳಿದರೂ ಜನ ಮಾತ್ರ ತಮ್ಮ ವರ್ತನೆಯಿಂದಲೇ ಎಲ್ಲವನ್ನೂ ಖರೀದಿಸಿ ಮನೆಗಳತ್ತ ಮುಖ ಮಾಡಿದರು.