– ಇನ್ನಿಬ್ಬರ ಹೆಸರು ಸೇರ್ಪಡೆಗೆ ಕಡೇ ಹಂತದ ಕಸರತ್ತು
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಮೂವರು ಶಾಸಕರಿಗೆ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.
Advertisement
ನಾಳೆ ನೀವು ಬೆಂಗಳೂರಿನಲ್ಲೇ ಇರಿ, ಎಲ್ಲೂ ಹೋಗಬೇಡಿ ಎಂದು ಸೂಚಿಸಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಇಲ್ಲದ ಶಾಸಕರಿಗೆ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ. ಹುಕ್ಕೇರಿಯ ಉಮೇಶ್ ಕತ್ತಿ, ಸುಳ್ಯದ ಅಂಗಾರ, ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಅವರಿಗೆ ಯಡಿಯೂರಪ್ಪ ಕರೆ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
Advertisement
ಇನ್ನಿಬ್ಬರ ಹೆಸರಿನ ಬಗ್ಗೆ ಇನ್ನೂ ಬಹಿರಂಗವಾಗಿಲ್ಲ ಕೊನೇ ಕ್ಷಣದ ವರೆಗೆ ಸಸ್ಪೆನ್ಸ್ ಕಾಪಾಡಿಕೊಳ್ಳಲಾಗಿದ್ದು, ಯೋಗೇಶ್ವರ್, ಲಿಂಬಾವಳಿ ಹೆಸರು ಸೇರ್ಪಡೆಗೆ ಕಡೇ ಹಂತದ ಕಸರತ್ತು ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ಯಾವುದೇ ರೀತಿಯ ಸ್ಪಷ್ಟನೆ ಲಭ್ಯವಾಗಿಲ್ಲ.
Advertisement
ಇಂದು ಬೆಳಗ್ಗೆಯಷ್ಟೇ ಪ್ರತಿಕ್ರಿಯಿಸಿದ್ದ ಸಿಎಂ, ಬುಧವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸುವ ಸಾಧ್ಯತೆಗಳಿವೆ ಎಂದಿದ್ದರು.
ಬುಧವಾರ ಸಂಜೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಇಂದು ಸಾಯಂಕಾಲ ಅಥವಾ ನಾಳೆ ಬೆಳಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮಾಧ್ಯಮಗಳಲ್ಲಿ ಹಲವರ ಹೆಸರು ಬರುತ್ತಿರೋದನ್ನ ಗಮನಿಸಿದ್ದೇನೆ. ನಾನೇ ಸಂಜೆ ಅವರ ಹೆಸರು ಹೇಳುತ್ತೇನೆ ಎಂದಿದ್ದರು. ಅಲ್ಲದೆ ಸಂಪುಟ ವಿಸ್ತರಣೆನಾ ಅಥವಾ ಪುನರ್ ರಚನೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಸಿಎಂ, ನಾಳೆ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದ್ದರು.
ಸಿಎಂ ದೆಹಲಿ ಪ್ರವಾಸದಿಂದ ಬಂದ ಬಳಿಕ ಏಳು ಸಚಿವ ಸ್ಥಾನಕ್ಕಾಗಿ ಸುಮಾರು 20ಕ್ಕೂ ಅಧಿಕ ಶಾಸಕರು ರೇಸ್ ನಲ್ಲಿದ್ದಾರೆ. ಮೂವರು ವಲಸಿಗರು ಮತ್ತು ಮೂಲ ನಾಲ್ಕು ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಮತ್ತು ಬಿಎಸ್ಪಿ ಉಚ್ಛಾಟಿತ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಹೆಸರು ಸಂಪುಟ ಸೇರ್ಪಡೆಯಾಗುವ ಪಟ್ಟಿಯಲ್ಲಿ ಮುನ್ನಲೆಗೆ ಬಂದಿದೆ ಎನ್ನಲಾಗಿದೆ.