ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಟಿಇಟಿ ಪರೀಕ್ಷೆ ನಡೆಯುತ್ತಿದ್ದು, ಕೊರೊನಾ ನಿಯಮಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
ಪರೀಕ್ಷೆ ನಡೆಸುವ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಹುತೇಕ ಪಿಯುಸಿ, ಎಸ್ಎಸ್ಎಲ್ಸಿ ಮಾರ್ಗಸೂಚಿಗಳು ಅನ್ವಯವಾಗಲಿವೆ. ಒಟ್ಟು 2.44 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದ 886 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಎಲ್ಲ ಕೇಂದ್ರಗಳಲ್ಲಿಯೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೊರೊನಾ ನಿಯಮದಂತೆ ಪರೀಕ್ಷೆ ನಡೆಸಲಾಗುತ್ತಿದೆ.
Advertisement
Advertisement
ಕೊರೊನಾ ಹಿನ್ನೆಲೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹುತೇಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯ ನಿಯಮಗಳನ್ನೇ ಅಳವಡಿಸಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿದೆ.