ನವದೆಹಲಿ: ಸ್ವಯಂಘೋಷಿತ ದೇವಮಾನದ ನಿತ್ಯಾನಂದನ ಸ್ವಯಂ ಕೈಲಾಸ ದೇಶಕ್ಕೆ ವೀಸಾ ಆಫರ್ ನೀಡಿದ್ದಾನೆ. ಈ ಕುರಿತ ನಿತ್ಯಾನಂದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾನೆ.
ಮೂರು ದಿನದ ವೀಸಾ: ಕೈಲಾಸಕ್ಕೆ ಮೂರು ದಿನದ ವೀಸಾ ನೀಡಲಾಗುವುದು. ನಿಮ್ಮ ಸ್ವಂತ ಹಣದಲ್ಲಿ ಮೊದಲು ಆಸ್ಟ್ರೇಲಿಯಾಗೆ ಬರಬೇಕು. ಅಲ್ಲಿಂದ ಕೈಲಾಸ ದೇಶದ ಚಾರ್ಟೆಡ್ ಫ್ಲೈಟ್ ಗರುಡ ನಿಮ್ಮನ್ನ ಇಲ್ಲಿಗೆ ಕರೆತರಲಾಗುವುದು. ಮೂರು ದಿನದಲ್ಲಿ ಒಂದು ಬಾರಿ ಅಂದ್ರೆ 10 ನಿಮಿಷ ನನ್ನ ದರ್ಶನ ನಿಮಗೆ ಸಿಗಲಿದೆ. ಈ ವೇಳೆ ನಿಮ್ಮ ಕಷ್ಟಗಳನ್ನ ನನ್ನ ಬಳಿ ಹೇಳಿಕೊಳ್ಳಬಹುದು. ಮೂರು ದಿನಕ್ಕಿಂತ ಹೆಚ್ಚು ಇಲ್ಲಿರಲು ಯಾರಿಗೂ ಅವಕಾಶವಿಲ್ಲ ಎಂದು ನಿತ್ಯಾನಂದ ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ.
Advertisement
Advertisement
ಕೈಲಾಸಕ್ಕೆ ಭೇಟಿ ನೀಡುವವರು ವೀಸಾ ಅಪ್ಲೈ ಮಾಡಲು ಲಿಂಕ್ (shrikailasa.org/e-passport) ಸಹ ನೀಡಿದ್ದಾನೆ. ಇಲ್ಲಿಗೆ ಬಂದ ಮೇಲೆ ಇನ್ನಷ್ಟು ದಿನ ಇರುತ್ತೇನೆ ಎಂದು ಹಠ ಹಿಡಿಯುವಂತಿಲ್ಲ. ಕೈಲಾಸದಲ್ಲಿ ನಿಮಗೆ ಆಹಾರ, ವಸತಿ ವ್ಯವಸ್ಥೆಯನ್ನ ಉಚಿತವಾಗಿ ಕಲ್ಪಿಸಲಾಗುವುದು ಎಂದು ನಿತ್ಯಾನಂದ ಹೇಳಿದ್ದಾರೆ.
Advertisement
ಗಣೇಶ ಚತುರ್ಥಿಯಂದು ನಿತ್ಯಾನಂದ ತನ್ನ ಕೈಲಾಸ ದೇಶದ ರಿಸರ್ವ್ ಬ್ಯಾಂಕ್ ಘೋಷಿಸಿದ್ದನು. ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಈಕ್ವೆಡಾರ್ ನ ಸಮುದ್ರದ ಮಧ್ಯದಲ್ಲಿರುವ ಪುಟ್ಟ ದ್ವೀಪದಲ್ಲಿ ಅತ್ಯಾಚಾರ ಆರೋಪಿ ನಿತ್ಯಾನಂದ ತನ್ನದೇ ಕೈಲಾಸ ದೇಶದ ರಿಸರ್ವ್ ಬ್ಯಾಂಕ್ನ್ನು ತನ್ನ ಸಹಚರರೊಂದಿಗೆ ಲಾಂಚ್ ಮಾಡಿದ್ದನು.
Advertisement
ನಾನು ಹಿಂದೂ ಧರ್ಮದ ಸುಧಾರಕನಲ್ಲ, ನಾನು ಪುನರುಜ್ಜೀವನಗೊಳಿಸುವವನು ಎಂದು ಹೇಳಿಕೊಂಡಿದ್ದನು. ಅಲ್ಲದೆ ಕರೆನ್ಸಿ ಬಿಡುಗಡೆ ಮಾಡಿದ ಕುರಿತ ಫೋಟೋಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ನಿತ್ಯಾನಂದ, ಗಣೇಶ ಚತುರ್ಥಿಯ ಅಂಗವಾಗಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸದ ಕರೆನ್ಸಿಯನ್ನು ಗಣೇಶನ ಹಾಗೂ ಪರಮಶಿವ ಮತ್ತು ಗುರು ಹಿಂದೂ ಧರ್ಮದ ಪ್ರಮುಖ, ಜಗದ್ಗುರು ಮಹಾಸನ್ನಿಧಾನಂ, ದೇವರ ಪ್ರತೀಕವಾಗಿರುವ ಭಗವಾನ್ ನಿತ್ಯಾನಂದ ಪರಮ ಶಿವಂ ಪಾದಗಳಿಗೆ ಅರ್ಪಿಸಲಾಗುತ್ತಿದೆ ಎಂದು ಪೋಸ್ಟ್ ಮಾಡಿದ್ದನು.
ಕೈಲಾಸ ಹಾಗೂ ಅದರ ಸನ್ಯಾಸಿಗಳ ತಂಡ 100ಕ್ಕೂ ಹೆಚ್ಚು ಪುಸ್ತಕ, 360 ಲೇಖನಗಳು ಹಾಗೂ ಸಂಶೋಧನಾ ಪ್ರಬಂಧಗಳನ್ನು ಒಳಗೊಂಡ ಹಿಂದೂ ಆರ್ಥಿಕ ನೀತಿಗಳ ಬಗ್ಗೆ ವ್ಯಾಪಕ ಸಂಶೋಧನೆ ಮತ್ತು ಅಧ್ಯಯನ ನಡೆಸಿ, ಕರೆನ್ಸಿ ತಯಾರಿಸಲಾಗಿದೆ ಎಂದು ಪೋಸ್ಟ್ ನಲ್ಲಿ ಬರೆಯಲಾಗಿತ್ತು. ಅಲ್ಲದೆ ನಿತ್ಯಾನಂದ ದೈವಿಕ ಪಾವಿತ್ರ್ಯತೆ ಹಾಗೂ ನೇರ ಭಾಷಣಗಳ ಮೂಲಕ ಕರೆನ್ಸಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದನು.
ಈ ಆರ್ಥಿಕ ನೀತಿಯು ಆಂತರಿಕ ಕರೆನ್ಸಿ ವಿನಿಮಯ ಹಾಗೂ ಬಾಹ್ಯ ವಿಶ್ವ ಕರೆನ್ಸಿ ವಿನಿಮಯವನ್ನು ಹೇಗೆ ಮಾಡಬೇಕು ಎಂಬುದನ್ನು ತಿಳಿಸುತ್ತದೆ. ಅಲ್ಲದೆ ಕೈಲಾಸ ದೇಶವು ಮತ್ತೊಂದು ರಾಷ್ಟ್ರದೊಂದಿಗೆ ಎಂಒಯುಗೆ ಸಹಿ ಹಾಕಿದ್ದು, ನಮ್ಮ ರಿಸರ್ವ್ ಬ್ಯಾಂಕ್ಗೆ ಆತಿಥ್ಯವಹಿಸಲಿದೆ ಎಂದು ತಿಳಿಸಿದ್ದಾನೆ. ಆದರೆ ಯಾವ ದೇಶ ಎಂಬುದನ್ನು ನಿತ್ಯಾನಂದ ಹೇಳಿಲ್ಲ.
ನಿತ್ಯಾನಂದ ತನ್ನ ದೇಶಕ್ಕೆ ಕೈಲಾಸ ಎಂದು ನಾಮಕರಣ ಮಾಡಿದ್ದು, ಇದಕ್ಕೆ ತನ್ನನ್ನೇ ಪ್ರಧಾನಿಯಾಗಿ ಘೋಷಿಸಿಕೊಂಡಿದ್ದಾನೆ. ಕಳೆದ ವರ್ಷ ನವೆಂಬರ್ ನಲ್ಲಿ ಇಂತಹದ್ದೊಂದು ದೇಶ ಕಟ್ಟುತ್ತಿರುವ ಕುರಿತು ನಿತ್ಯಾನಂದ ಮಾಹಿತಿ ನೀಡಿದ್ದ. ನಿತ್ಯಾನಂದನ ವಿರುದ್ಧ 50 ಕ್ಕೂ ಹೆಚ್ಚು ನ್ಯಾಯಾಲಯಗಳಲ್ಲಿ ಪ್ರಕರಣಗಳಿದ್ದು, ವಿಚಾರಣೆಗೆ ಹಾಜರಾಗದೆ ಇಕ್ವಿಡಾರ್ ಗೆ ಪರಾರಿಯಾಗಿದ್ದಾನೆ.
ಕೈಲಾಸ ಎಲ್ಲಿದೆ ಎಂಬುದು ನಿಖರವಾಗಿ ತಿಳಿದಿಲ್ಲ. ಆದರೆ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿದ್ದು, ಈಕ್ವೆಡಾರ್ ನ ಸಮುದ್ರದ ಮಧ್ಯದಲ್ಲಿರುವ ಪುಟ್ಟ ದ್ವೀಪವನ್ನು ನಿತ್ಯಾನಂದ ಖರೀದಿಸಿ ಅದಕ್ಕೆ ಕೈಲಾಸ ಎಂದು ನಾಮಕರಣ ಮಾಡಿದ್ದಾನೆ ಎನ್ನಲಾಗುತ್ತಿದೆ. ಆದರೆ ಈಕ್ವೆಡಾರ್ ಇದನ್ನು ಅಲ್ಲಗಳೆದಿದ್ದು, ಅಂತಹ ಯಾವುದೇ ವ್ಯಕ್ತಿಗೆ ದ್ವೀಪವನ್ನು ನೀಡಿಲ್ಲ ಎಂದು ಹೇಳಿದೆ.