ಮಂಗಳೂರು: ಡ್ರಗ್ಸ್ ಕೇಸ್ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿದ್ದ ಹಿನ್ನೆಲೆಯಲ್ಲಿ ಇಂದು ನಿರೂಪಕಿ ಅನುಶ್ರೀ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ಸಿಸಿಬಿ ನೋಟಿಸ್ – ಮಾಧ್ಯಮಗಳಲ್ಲಿ ಅನುಶ್ರೀ ಮನವಿ
ಮಂಗಳೂರಿನ ಪಣಂಬೂರು ಠಾಣೆಯಲ್ಲಿ ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಶುಕ್ರವಾರವೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಹೋಗಿದ್ದರು. ಆದರೆ ಮಂಗಳೂರು ತಲುಪುತ್ತಿದ್ದಂತೆ ಅನುಶ್ರೀ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಪಣಂಬೂರು ಠಾಣೆಗೆ ಆಗಮಿಸಿದ್ದಾರೆ. ಸದ್ಯಕ್ಕೆ ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಪೊಲೀಸರಿಂದ ಅನುಶ್ರೀಯ ವಿಚಾರಣೆ ಆರಂಭಗೊಂಡಿದೆ.
Advertisement
Advertisement
ಡ್ರಗ್ಸ್ ಪೆಡ್ಲರ್ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿತ್ತು. ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೋಲಿಸರಿಗೆ ಶುಕ್ರವಾರವೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. ಆದರೆ ನಿನ್ನೆ ಅನುಶ್ರಿ ವಿಚಾರಣೆಗೆ ಹಾಜರಾಗಿರಲಿಲ್ಲ. ಗುರುವಾರ ರಾತ್ರಿ ಸೋಷಿಯಲ್ ಮೀಡಿಯಾ ಫೇಸ್ಬುಕ್ನಲ್ಲಿ ಪತ್ರಿಕಾ ಪ್ರಕಟಣೆ ಹಾಕಿದ್ದ ಅನುಶ್ರೀ ಶುಕ್ರವಾರ ಬೆಳಗ್ಗೆ ಮಂಗಳೂರು ಸಿಸಿಬಿ ಪೋಲಿಸರ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಇಂದು ಮುಂಜಾನೆ 5ಗಂಟೆಗೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದರು. ಆದರೆ ಅನುಶ್ರೀ ಮಾತ್ರ ವಿಚಾರಣೆಗೆ ಹಾಜರಾಗಿಲ್ಲ.
Advertisement
Advertisement
ಇತ್ತ ಅನುಶ್ರೀ ವಿಚಾರಣೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಕ್ರೈಂ ಠಾಣೆ ಪೊಲೀಸರು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. 15 ಜನ ಅಧಿಕಾರಿಗಳು, ಸಿಬ್ಬಂದಿಯಿಂದ ವಿಚಾರಣೆಗೆ ತಯಾರಿ ಮಾಡಲಾಗಿತ್ತು. ಮೊದಲ ಹಂತದಲ್ಲಿ ಆರೋಪಿಗಳಾದ ಕಿಶೋರ್ ಅಮನ್, ತರುಣ್ ರಾಜ್ ಜೊತೆಗಿನ ಸಂಬಂಧ ಬಗ್ಗೆ ಪ್ರಶ್ನಿಸಿ, ಎರಡನೇ ಹಂತದಲ್ಲಿ ಸಾಕ್ಷ್ಯ ತೋರಿಸಿ ಅನುಶ್ರೀಗೆ ಪ್ರಶ್ನೆ ಮಾಡಲು ತಯಾರಿ ನಡೆಸಿದ್ದರು. ಆದರೆ ಅನುಶ್ರೀ ನಿನ್ನೆ ವಿಚಾರಣೆಗೆ ಹಾಜರಾಗಿಲ್ಲ.
ಈಗಾಗಲೇ ಬಂಧನವಾಗಿರುವ ಕಿಶೋರ್, ತರುಣ್, ನೌಶೀನ್ ಮಂಗಳೂರಿನ ಪಾಂಡೇಶ್ವರದಲ್ಲಿನ ಇಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಸಾಕಷ್ಟು ಮಾಹಿತಿ ಸಂಗ್ರಹಿಸಿದ ಪೊಲೀಸರು ಶುಕ್ರವಾರ ಸಂಜೆ ವೇಳೆಗೆ ಕಿಶೋರ್ ಹಾಗೂ ನೌಶೀನ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋರ್ಟಿಗೆ ಹಾಜರುಪಡಿಸುವ ಮುನ್ನ ಆರೋಪಿಗಳಿಗೆ ಡ್ರಿಲ್ ಮಾಡಲಾಗಿದ್ದು, ಆರೋಪಿ ತರುಣ್ ಅನುಶ್ರೀ ಬಗೆಗಿನ ಮಹತ್ವದ ಸಂಗತಿಗಳನ್ನು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.
ಬಂಧನ ಮಾಡಿದ ಬಳಿಕ ತರುಣ್, ಅನುಶ್ರೀ ಕುಡಿತ್ತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಹೀಗಾಗಿ ತರುಣ್ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗುತ್ತಿರುವ ಈ ಎಲ್ಲಾ ಮಾಹಿತಿಗಳು ಅನುಶ್ರೀಗೆ ಕಂಟಕವಾಗುವ ಸಾಧ್ಯತೆಗಳಿವೆ.