ಹಾಸನ: ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ, ಲಸಿಕೆ ಕೊಡಿ ಎಂದು ಕೈಮುಗಿದು ಕೇಳಿಕೊಳ್ಳುತ್ತಿದ್ದೇವೆ. ಎಲ್ಲರಿಗೂ ವ್ಯಾಕ್ಸಿನೇಷನ್ ಮಾಡಿ ಎಂದು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ವ್ಯಂಗ್ಯ ಮಾಡಿ ಕಿಡಿಕಾರಿದ್ದಾರೆ.
ಹಾಸನದ ಶ್ರೀನಗರ ಬಡಾವಣೆಯಲ್ಲಿ ಪುಡ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಲು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳುವಂತೆ ಸರ್ಕಾರ ತಿಳಿಸಿದೆ. ಆದರೆ ಗ್ರಾಮೀಣ ಭಾಗದ ಜನರಿಗೆ ಅದು ಗೊತ್ತಾಗುವುದಿಲ್ಲ. ಹಾಗಾಗಿ ನಮ್ಮ ಕಾರ್ಯಕರ್ತರಿಗೆ ಸೂಚನೆ ಕೊಟ್ಟಿದ್ದೆ. ಅದರಂತೆ ಗೊತ್ತಿಲ್ಲದವರು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಸರ್ಕಾರ ಆನ್ ಲೈನ್ ರಿಜಿಸ್ಟ್ರೇಷನ್ ನಿಲ್ಲಿಸಿದೆ ಎಂದು ದೂರಿದರು.
Advertisement
Advertisement
ಸರ್ಕಾರದ ಬಳಿ 18 ರಿಂದ 44 ವರ್ಷದವರೆಗೆ ಯುವಕರಿಗೆ ನೀಡಲು ಯಾವ ಲಸಿಕೆಯೂ ಇಲ್ಲ. ನಮ್ಮ ಉದ್ದೇಶ ವ್ಯಾಕ್ಸಿನೇಷನ್ ನೀಡಬೇಕು. ಜನರ ಜೀವ ಉಳಿಯಬೇಕು. ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ. ಲಸಿಕೆ ಕೊಡಿ ಎಂದು ಕೈಮುಗಿದು ಕೇಳಿಕೊಳ್ಳುತ್ತಿದ್ದೇವೆ. ಎಲ್ಲರಿಗೂ ವ್ಯಾಕ್ಸಿನೇಷನ್ ನೀಡಿ ಎಲ್ಲರ ಜೀವ ಉಳಿಸಿ ಎಂದಿದ್ದಾರೆ. ಇದನ್ನು ಓದಿ: ಮುಳಬಾಗಿಲು ಪಟ್ಟಣದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ
Advertisement
ಕೆಲವು ಜನರಿಗೆ ಖರೀದಿ ಮಾಡಲು ಲಸಿಕೆ ಸಿಗುತ್ತದೆ. ಆದರೆ ಸರ್ಕಾರಕ್ಕೆ ಏಕೆ ಸಿಗುತ್ತಿಲ್ಲ. ಅದ್ಯಾರೋ ಸಂಸದರು 900 ರೂ. ಗೆ ಲಸಿಕೆ ಸಿಗುತ್ತೆ ಅಂತಾರೆ ಅದು ಹೇಗೆ ಎಂದು ಪರೋಕ್ಷವಾಗಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಶ್ನಿಸುತ್ತಾ, ಜನರಿಗೆ ಲಸಿಕೆ ಕೊಟ್ಟು ಒಳ್ಳೆಯ ಹೆಸರು ತೆಗೆದುಕೊಳ್ಳಿ ಎಂದು ಸರ್ಕಾರಕ್ಕೆ ತಿಳಿ ಹೇಳಿದರು.
Advertisement
ರಮೇಶ್ ಜಾರಕಿಹೋಳಿ ಎಸ್ಐಟಿ ತನಿಖೆಗೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಸಿಎಂ, ಗೃಹ ಸಚಿವರು ಎರಡು ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಆ ಎರಡು ಹೇಳಿಕೆಯಲ್ಲಿ ಗೊತ್ತಾಗುತ್ತಿದೆ. ಯಾವ ರೀತಿ ರಕ್ಷಣೆ ಮಾಡುತ್ತಿದ್ದಾರೆ ಎನ್ನುವುದು ತಿಳಿಯುತ್ತದೆ. ನಾವು ರಾಜ್ಯಾದ್ಯಂತ ನಮ್ಮದೇ ಆದ ಹೋರಾಟ ಮಾಡುತ್ತೇವೆ. ಇದನ್ನು ಬಿಡುವುದಿಲ್ಲ. ಅಧಿಕಾರಿಗಳು ಸರ್ಕಾರದ ಮಾತು ಕೇಳಿ ಏನು ಮಾಡುತ್ತಿದ್ದಾರೆ. ನಮಗೆ ಗೊತ್ತಿದೆ ಇದರ ವಿರುದ್ದ ಹೋರಾಟದ ರೂಪುರೇಷೆ ಮಾಡುತ್ತೇನೆ ಎಂದು ಹೇಳಿದರು. ಇದನ್ನು ಓದಿ: ಲಾಕ್ಡೌನ್ ಬಗ್ಗೆ ಜೂನ್ 5ರಂದು ಸಿಎಂ ತೀರ್ಮಾನ ಮಾಡ್ತಾರೆ: ಬೊಮ್ಮಾಯಿ
ನಾನು ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ರೈತರ ಕಷ್ಟ ಆಲಿಸುತ್ತಿದ್ದೇನೆ. ಇಂದು ಮಾರುಕಟ್ಟೆಗಳಲ್ಲಿ ಹೂವು ಹಣ್ಣು, ತರಕಾರಿ ಮಾರಾಟ ಮಾಡುವ ರೈತರ ಜೊತೆ ಮಾತನಾಡಲು ಬಂದಿದ್ದೆ. ಆದರೆ ಲಾಕ್ ಡೌನ್ ಇರುವುದರಿಂದ ಸಾಧ್ಯವಾಗಲಿಲ್ಲ ಮತ್ತೊಮ್ಮೆ ಬರುತ್ತೇನೆ ಎಂದರು.