ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆವಿಆರ್ ಠಾಗೂರ್ರವರು ಇಂದು ಕೊರೊನಾಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆವಿಆರ್ ಠಾಗೂರ್ರವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನಾಗಿದ್ದಾರೆ. ಕೆವಿಆರ್ ಠಾಗೂರ್ರವರು ಒಬ್ಬ ದಕ್ಷ ಹಾಗೂ ಸದಾ ಲವಲವಿಕೆಯಿಂದ ಇರುತ್ತಿದ್ದ ಕ್ರಿಯಾಶೀಲ ಅಧಿಕಾರಿಯಾಗಿದ್ದರು.
Advertisement
ವಾರ್ತಾ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ ಅವರು 2006ರಲ್ಲಿ ನಡೆದ ಶ್ರವಣಬೆಳಗೊಳ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಪ್ರಚಾರ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.