– ದುಡ್ಡಿಗಾಗಿ ಬಸಕಲ್ಯಾಣದ ಬಿಜೆಪಿ ಟಿಕೆಟ್ ಸೇಲ್ ಮಾಡಿದ್ದಾರೆ
ಬೀದರ್: ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿದರೆ ಏನಾಗುತ್ತದೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ತಿಳಿಯಬೇಕು ಎಂದು ಬಸವಕಲ್ಯಾಣ ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ್ ಖೂಬಾ ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಷ್ಠಾವಂತರಿಗೆ ಪಕ್ಷ ಅನ್ಯಾಯ ಮಾಡಿದೆ. ಉಚ್ಛಾಟನೆ ಮಾಡಿದ್ದನ್ನು ಸ್ವಾಗತಿಸುತ್ತೇನೆ. ಅವರು ಏನೇ ಮಾಡಿದರೂ ಸಂತೋಷದಿಂದ ಸ್ವಾಭಿಮಾನದಿಂದ ಬದುಕುತ್ತೆನೆ. ಪಕ್ಷದಿಂದ ನನಗೆ ಏನು ಅನ್ಯಾಯ ಆಗಿದೆ ಎಂದು ಅದು ಪಕ್ಷದ ಹಿರಿಯರಿಗೆ ಗೋತ್ತಿದೆ. ಕಾರ್ಯಕರ್ತರಿಗೆ ಅನ್ಯಾಯ ಮಾಡಿದರೆ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಏನಾಗುತ್ತೆ ಎಂದು ಅವರು ತಿಳಿದುಕೊಳ್ಳಬೇಕು. ನಾನು ತನು, ಮನ, ಧನ ಹಾಗೂ ಶ್ರಮದಿಂದ ಪಕ್ಷಕ್ಕಾಗಿ ಕೆಲಸ ಮಾದ್ದೇನೆ. ಇದರಿಂದ ನನಗೆ ಏನೂ ಆಗುವುದಿಲ್ಲ. ಪಕ್ಷಗಳು ಬರುತ್ತವೆ, ಹೋಗತ್ತವೆ ಆದರೆ ನಮ್ಮ ನಿಷ್ಠೆ ಜನರ ಪರವಾಗಿ ಇರುತ್ತದೆ ಎಂದು ಟಾಂಗ್ ನೀಡಿದರು.
Advertisement
Advertisement
ಪಕ್ಷದಲ್ಲಿ ಯಾರು ದುಡಿಯುತ್ತಾರೋ ಅವರಿಗೆ ಟಿಕೆಟ್ ನೀಡಬೇಕು. ಐಡಿ ಕ್ರಿಯೇಟ್ ಮಾಡಿ, ದುಡ್ಡಿಗೋಸ್ಕರ ಟಿಕೆಟ್ ಸೇಲ್ ಮಾಡಿದ್ದಾರೆ. ಇಂತಹ ಕೆಲಸದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಬಸವಕಲ್ಯಾಣದ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದೇನೆ, ಯಾವುದೇ ಪಕ್ಷದಲ್ಲಿ ಮುಂದೆ ಈ ರೀತಿ ಆಗಬಾರದು ಎಂದರು.
Advertisement
ಬಿಜೆಪಿಯವರು ಒಂದು ಕುಟುಂಬಕ್ಕೆ 3 ಸಾವಿರ ರೂ. ಹಣ ನೀಡಿದ್ದಾರೆ. ಈ ಮೂಲಕ ಚುನಾವಣೆ ಪ್ರಚಾರ ಮಾಡಿದ್ದಾರೆ. ಸರ್ಕಾರ ಪಾರದರ್ಶಕವಾಗಿ ಚುನಾವಣೆ ಮಾಡಬೇಕಿತ್ತು. ಆದರೆ ಶರಣರ ನಾಡಿನಲ್ಲಿ ದುಡ್ಡಿನ ಹೊಳೆ ಹರಿಸಿ ಚುನಾವಣೆ ನಡೆಸಿದ್ದಾರೆ. ಒಂದು ಕಾರಿನಲ್ಲಿ ಕೋಟಿಗಟ್ಟಲೇ ಹಣ ಕೊಂಡೊಯ್ದು, ಹಂಚಿದ್ದಾರೆ. ಹಲವು ಕಡೆ ವಾಹನಗಳನ್ನು ಸೀಜ್ ಮಾಡಿದ್ದಾರೆ. ದುಡ್ಡು ಹಂಚಿ ಚುನಾವಣೆ ಮಾಡುವ ಮೂಲಕ ಬಸವಣ್ಣನವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಮಾಡಿದ್ದಾರೆ ಎಂದರು.
ನಮಗೆ ಜನರ ಬೆಂಬಲವಿದೆ, ಸ್ವಾಭಿಮಾನಿ ಬಸವಕಲ್ಯಾಣ ಜನ ನನ್ನನ್ನು ಕೈ ಬಿಡುವುದಿಲ್ಲ. ನ್ಯಾಯಕ್ಕಾಗಿ ಒಳ್ಳೆಯ ರೀತಿಯಲ್ಲಿ ಸಪೋರ್ಟ್ ಮಾಡುತ್ತಿದ್ದಾರೆ, ಎಲ್ಲ ಕಡೆ ವಾತಾವರಣ ಚೆನ್ನಾಗಿದೆ ಎಂದರು.