Connect with us

Cricket

ಹೊಸ ಅತಿಥಿ ಜೊತೆಗೆ ಧೋನಿ ಜಾಲಿ ರೈಡ್- ವಿಡಿಯೋ

Published

on

ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬೈಕ್‍ಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದಾರೆ.  ಹೀಗಾಗಿ ಅವರು ರಾಂಚಿಯಲ್ಲಿರುವ ತೋಟದ ಮನೆಯ ಗ್ಯಾರೇಜ್‍ನಲ್ಲಿ ಅನೇಕ ಬೈಕ್ ಗಳನ್ನು ಸಂಗ್ರಹಿಸಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಎಂ.ಎಸ್. ಧೋನಿ ಅವರು ನ್ಯೂ ಗೆಸ್ಟ್ ಜೊತೆಗೆ ಜಾಲಿ ರೈಡ್ ಹೋಗಿ ಬಂದಿದ್ದಾರೆ. ಆದರೆ ಈ ಬಾರಿ ಧೋನಿ ಬೈಕ್ ಅಥವಾ ಕಾರು ಓಡಿಸದೆ ಟ್ರ್ಯಾಕ್ಟರ್ ಚಾಲನೆ ಮಾಡಿದ್ದಾರೆ.

Advertisement
Continue Reading Below

ಎಂ.ಎಸ್.ಧೋನಿ ಟ್ರ್ಯಾಕ್ಟರ್ ಸವಾರಿಯನ್ನು ಆನಂದಿಸಿದ ವಿಡಿಯೋವನ್ನು ಸಿಎಸ್‍ಕೆ ಟ್ವೀಟ್ ಮೂಲಕ ಹಂಚಿಕೊಂಡಿದೆ. ಈ ಹಿಂದೆ ಧೋನಿ ತಮ್ಮ ಮಗಳು ಝೀವಾ ಜೊತೆಗೆ ತೋಟದ ಮನೆಯಲ್ಲಿ ಬೈಕ್ ಸವಾರಿಯನ್ನು ಆನಂದಿಸುತ್ತಿರುವ ವಿಡಿಯೋವನ್ನು ಪತ್ನಿ ಸಾಕ್ಷಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದರು.

2019ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‍ನ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೋತ ನಂತರ ಧೋನಿ ಕ್ರಿಕೆಟ್‍ನಿಂದ ದೂರ ಉಳಿದಿದ್ದಾರೆ. ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಕ್ಕೆ ಕಮ್‍ಬ್ಯಾಕ್ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಕೊರೊನಾ ವೈರಸ್‍ನಿಂದಾಗಿ ಟೂರ್ನಿ ಕೂಡ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ.

ಧೋನಿ ಅವರ ನಿವೃತ್ತಿ ವಿಚಾರ ಮುನ್ನೆಲೆಯಲ್ಲಿ ಇದ್ದಾಗಲೇ ಮೇ 27ರಂದು ಸಂಜೆ ಟ್ವಿಟ್ಟರ್ ನಲ್ಲಿ ಧೋನಿ ನಿವೃತ್ತಿ ಬಗ್ಗೆ #DhoniRetires ಎಂಬ ಹ್ಯಾಸ್‍ಟ್ಯಾಗ್ ಬಳಸಿ ಟ್ರೆಂಡ್ ಹುಟ್ಟುಹಾಕಲಾಗಿತ್ತು. ಇದನ್ನು ಕಂಡು ಕೋಪಗೊಂಡ ಸಾಕ್ಷಿ, ಇದೊಂದು ಸಳ್ಳು ಸುದ್ದಿ. ಈ ಲಾಕ್‍ಡೌನ್ ಸಮಯದಲ್ಲಿ ಜನರು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದು ಖಾರವಾಗಿ ಪ್ರತಿಕ್ರಿಯಿಸಿದ್ದರು. ನಂತರ ಈ ಟ್ವೀಟ್ ಡಿಲೀಟ್ ಕೂಡ ಮಾಡಿದ್ದರು.

Click to comment

Leave a Reply

Your email address will not be published. Required fields are marked *