ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿ ವಾರ್ಡಿನ ಪಂತರಪಾಳ್ಯದಲ್ಲಿ 150 ಹಾಸಿಗೆಗಳ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇನ್ನು ಹತ್ತು ತಿಂಗಳ ಅವಧಿಯಲ್ಲಿ ಸಿದ್ಧಗೊಳ್ಳಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
Advertisement
ಸಚಿವರು ಇಂದು ಆಸ್ಪತ್ರೆ ನಿರ್ಮಾಣವಾಗಲಿರುವ ಸ್ಥಳ ಪರಿಶೀಲನೆ ನಡೆಸಿದ ನಂತರ ಮಾತನಾಡಿ, ಇನ್ನು 15 ದಿನಗಳಲ್ಲಿ ಮುಖ್ಯಮಂತ್ರಿಗಳು ಈ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಂದಿನ ಹತ್ತು ತಿಂಗಳಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಈ ಭಾಗದ ಜನರಿಗೆ ಉಚಿತ ಹಾಗೂ ಉತ್ತಮ ವೈದ್ಯೋಪಚಾರಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಕೊರೊನಾ ವ್ಯಾಕ್ಸಿನ್ಗೆ ಆನ್ಲೈನ್ ನೋಂದಣಿ ಕಡ್ಡಾಯವಲ್ಲ
Advertisement
Advertisement
ಕೊರೊನಾ ಸೋಂಕನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ಪ್ರಧಾನಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಕಾರ್ಯತತ್ಪರರಾಗಿದ್ದಾರೆ. ಅವರೊಂದಿಗೆ ಕೈ ಜೋಡಿಸುವ ಕೆಲಸವನ್ನು ಸಾರ್ವಜನಿಕರು ಮಾಡಬೇಕಾಗಿದೆ ಎಂದು ಹೇಳಿದ ಸಚಿವರು, ನಿಮ್ಮ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಿ. ಬಡವರು- ಶ್ರೀಮಂತರು ಎಂಬ ಬೇಧ ಭಾವವಿಲ್ಲದೆ, ಸಮನ್ವಯದ ಜೀವನ ನಡೆಸುವ ಮೂಲಕ ನಾವು ಕೊರೊನಾ ಮೇಲೆ ಜಯ ಸಾಧಿಸೋಣ ಎಂದು ವಿ.ಸೋಮಣ್ಣ ಈ ಸಂದರ್ಭದಲ್ಲಿ ಹೇಳಿದರು.
Advertisement
ಪಂತರಪಾಳ್ಯ ನಿವಾಸಿಗಳಿಗೆ ಸಚಿವ ಸೋಮಣ್ಣನವರು ನೆರೆಯ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರೊಂದಿಗೆ ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಿಸಿದರು. ಬಡವರು, ಕಾರ್ಮಿಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಕೋವಿಡ್ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಮಯದಲ್ಲಿ ಅವರ ನೆರವಿಗೆ ವಿ.ಸೋಮಣ್ಣನವರು ಬಂದಿದ್ದಾರೆ ಎಂದು ಶಾಸಕ ಮುನಿರತ್ನ ಹೇಳಿದರು. ಇದನ್ನೂ ಓದಿ: ವಿದೇಶಕ್ಕೆ ತೆರಳುವ ಫಲಾನುಭವಿಗಳ ಕೋವಿಶೀಲ್ಡ್ ಲಸಿಕೆ ಪಡೆಯುವ ಅಂತರ ಕಡಿತ
ಮಂಡಲಾಧ್ಯಕ್ಷ ವಿಶ್ವನಾಥ ಗೌಡ, ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್’ಗಳಾದ ದಾಸೆಗೌಡ, ಉಮಾ ಶಂಕರ್, ವಾಗೀಶ್ ಮತ್ತು ಡಾ.ಅರುಣ್ ಸೋಮಣ್ಣ ಉಪಸ್ಥಿತರಿದ್ದರು.