ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.
ಚೆನ್ನೈನಿಂದ 190 ಕಿ.ಮೀ ದೂರದಲ್ಲಿರುವ ಕಡಲೂರು ಜಿಲ್ಲೆಯ ಕುರುಂಗುಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣೆ ಕಾರ್ಯದಲ್ಲಿ ನಿರತರಾಗಿದ್ದಾರೆ.
Advertisement
Six dead and three injured in a fire at a firecrackers factory in Cuddalore, Tamil Nadu: Superintendent of Police, Cuddalore pic.twitter.com/SmOUuACELK
— ANI (@ANI) September 4, 2020
Advertisement
ಸದ್ಯಕ್ಕೆ ಪೊಲೀಸರು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದಕ್ಕೆ ಕಾರಣವನ್ನು ಪತ್ತೆ ಹಚ್ಚುತ್ತಿದ್ದಾರೆ. ಈ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಡಲೂರು ಪೊಲೀಸ್ ವರಿಷ್ಠಾಧಿಕಾರಿ ಎಂ.ಅಭಿನವ್ ಹೇಳಿದ್ದಾರೆ.
Advertisement
ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದಿಯಾ ಅಥವಾ ಸ್ಫೋಟವೇ ಎಂಬುದು ಇನ್ನೂ ತಿಳಿದು ಬಂದಿಲ್ಲ. ಸದ್ಯಕ್ಕೆ ಈ ಕುರಿತು ತನಿಖೆ ನಡೆಸುತ್ತಿದ್ದೇವೆ. ಶಾರ್ಟ್ ಸರ್ಕ್ಯೂಟ್ನಿಂದಲೂ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Advertisement
Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt
— ANI (@ANI) September 4, 2020