ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ಬಡ ಜನರಿಗೆ ಅನುಕೂಲವಾಗುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಉಚಿತವಾಗಿ ನೀಡಿದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಪಡಿತರ ಅಕ್ಕಿಗೆ ಪಾಲಿಶ್ ಮಾಡಿ ಸೋನಾ ಮಸೂರಿ ಎಂದು ಮಾರಾಟ ಮಡುತ್ತಿದ್ದ ರೈಸ್ ಮಿಲ್ ಮಾಲೀಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
Advertisement
ಬಂಧಿತ ಆರೋಪಿಯನ್ನು ವೇಣುಗೋಪಾಲ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿ ಬಳಿ ಇರೋ ಕೈಗಾರಿಕಾ ಪ್ರದೇಶದಲ್ಲಿ ಸಪ್ತಗಿರಿ ರೈಸ್ ಮಿಲ್ ನಡೆಸುತ್ತಿರುವ ಈತ ಸರ್ಕಾರದ ಪಡಿತರ ಅಕ್ಕಿಗೆ ಕನ್ನ ಹಾಕಿ ಪಾಲಿಶ್ ಮಾಡಿ ವಿವಿಧ ಬ್ರ್ಯಾಂಡ್ ಗಳ ಹೆಸರಲ್ಲಿ ಸೋನಾ ಮಸೂರಿ ಅಕ್ಕಿ ಎಂದು ಜನರಿಗೆ ವಂಚಿಸುತ್ತಿದ್ದ. ಈ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ದಾಳಿ ಮಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರ ತಂಡ ವೇಣುಗೋಪಾಲನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:ಬಂಗಾರದ ಮೋಹದ ರಾಣಿಯ ಮಹಾವಂಚನೆಯ ಕಥೆ – RBI ಹೆಸರಿನಲ್ಲಿ ನಕಲಿ ದಾಖಲೆ
Advertisement
Advertisement
ವೇಣುಗೋಪಾಲ ಪಡಿತರ ಅಕ್ಕಿಯನ್ನು ಪಾಲಿಶ್ ಮಾಡಿ ಸೋನಾ ಮಸೂರಿ ಅಕ್ಕಿ ಎಂದು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ, ಪಡಿತರ ಅಕ್ಕಿಗೆ ಪಾಲಿಶ್ ಮಾಡಿ ಕರ್ನೂಲ್ ಸೋನಾ ಮಸೂರಿ, ನಂಬರ್ 1 ಸೇರಿದಂತೆ ಹಲವು ಬ್ರ್ಯಾಂಡ್ಗಳ ಹೆಸರಲ್ಲಿ ಜನರಿಗೆ ದುಬಾರಿ ಬೆಲೆಗೆ ಮಾರುತ್ತಿದ್ದ ಮತ್ತು ಅಕ್ರಮವಾಗಿ ಅಕ್ಕಿಯನ್ನು ದಾಸ್ತಾನು ಮಾಡಿಕೊಂಡಿದ್ದ.
Advertisement
ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ರೈಸ್ ಮಿಲ್ ಚಾಲನೆ ಮಾಡುತ್ತಿದ್ದ. ದಾಳಿ ವೇಳೆ ರೈಸ್ ಮಿಲ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 350 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಜಿಲ್ಲಾಡಳಿತ ವಶಪಡಿಸಿಕೊಂಡಿದೆ. ನಂದಿಗಿರಿಧಾಮ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.