ಮೈಸೂರು: ಕೋವಿಡ್ನಿಂದ ಮೃತಪಟ್ಟ ಪತ್ನಿಯ ತಿಥಿ ದಿನವೇ ಪತಿಯೂ ಕೋವಿಡ್ನಿಂದಾಗಿ ಸಾವನ್ನಪ್ಪಿದ್ದು, ಇವರ ಇಬ್ಬರು ಮಕ್ಕಳು ಅನಾಥರಾಗಿರುವ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇದನ್ನೂ ಓದಿ: ಪತ್ನಿಗೆ ಕೊರೊನಾ- ಪ್ರಾಣ ಬಿಟ್ಟ ಪತಿರಾಯ
Advertisement
ಕೆ. ಸುಷ್ಮ(37) ಹಾಗೂ ಡಿ.ಪ್ರಸನ್ನ(44) ಮೃತರಾಗಿದ್ದಾರೆ. ಮೈಸೂರಿನ ಗಂಗೋತ್ರಿ ಲೇಔಟ್ನ ನಿವಾಸಿಗಳಾದ ಇವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಹಾಸನ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕಿ ಕೆ. ಸುಷ್ಮ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಪತಿ ಡಿ.ಪ್ರಸನ್ನ ಮೈಸೂರು ವಿಶ್ವವಿದ್ಯಾನಿಲಯದ ತೋಟಗಾರಿಕೆ ವಿಭಾಗದಲ್ಲಿ ತಾತ್ಕಾಲಿಕ ವಾಹನ ಚಾಲಕ ರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ:
ಕೊರೊನಾ ಸೋಂಕಿಗೆ ಒಂದು ವರ್ಷದ ಕಂದಮ್ಮ ಬಲಿ
Advertisement
Advertisement
ತಿಂಗಳ ಹಿಂದೆ ಪತಿಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ ಪತ್ನಿಯಲ್ಲಿಯೂ ಸೋಂಕು ಕಾಣಿಸಿಕೊಂಡಿತ್ತು. ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮಧ್ಯೆ ಶಾಲೆಗೆ ರಜೆ ಇದ್ದ ಕಾರಣ ಮಕ್ಕಳನ್ನು ತಾತ ಹುಣಸೂರು ತಾಲ್ಲೂಕಿನಲ್ಲಿನ ಮನೆಯಲ್ಲಿ ಇದ್ದರು. 11 ದಿನದ ಹಿಂದೆ ಸುಷ್ಮ ಮೃತಪಟ್ಟಿದ್ದರು. ಶುಕ್ರವಾರ ಸುಷ್ಮಾ ಅವರ ಹನ್ನೊಂದನೇ ದಿನದ ಕಾರ್ಯವನ್ನು ಮಾಡಲು ಮೈಸೂರಿಗೆ ಮಕ್ಕಳು ಆಗಮಿಸಿದ್ದರು. ಇತ್ತ ತಿಥಿ ಕಾರ್ಯ ನಡೆಯಬೇಕಾದರೆ ತಂದೆ ಪ್ರಸನ್ನ ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ 14,12 ವರ್ಷದ ಇಬ್ಬರು ಹೆಣ್ಣು ಮಕ್ಕಳ ಭವಿಷ್ಯಕ್ಕೆ ಕಾರ್ಮೋಡ ಆವರಿಸಿದೆ. ಇದನ್ನೂ ಓದಿ: ಕೊರೊನಾದಿಂದ ದೂರವಿರಲು ಹಾವು ತಿಂದ