ಮುಂಬೈ: ಬಾಲಿವುಡ್ ಬಾದ್ ಶಾ ನಟ ಶಾರೂಕ್ ಖಾನ್ರವರ ಪುತ್ರ ಆರ್ಯನ್ ಖಾನ್ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆರ್ಯನ್ ಖಾನ್ರವರು ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದು, ಸಮಾರಂಭದ ಉಡುಪು ಧರಿಸಿ ಕೈನಲ್ಲಿ ಸರ್ಟಿಫಿಕೇಟ್ ಹಿಡಿದುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಆರ್ಯನ್ ಅಷ್ಟಾಗಿ ಆಕ್ಟೀವ್ ಆಗಿಲ್ಲ. ಆದರೆ ಅವರ ಅಭಿಮಾನಿಗಳು ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ನಡೆದಿದ್ದು, ವಿದ್ಯಾರ್ಥಿಗಳನ್ನು ದೂರ ದೂರ ಕೂರಿಸಿ ಪದವಿ ಪ್ರಧಾನ ಸಮಾರಂಭ ನಡೆಸಲಾಗಿದೆ. ಈ ಸಮಾರಂಭದಲ್ಲಿ ಶಾರೂಕ್ ಪುತ್ರ ಆರ್ಯನ್ ಕೂಡ ಭಾಗಿಯಾಗಿದ್ದರು.
ಆರ್ಯನ್ ಖಾನ್ 2020ರ ಬ್ಯಾಚ್ನ ಬ್ಯಾಚುಲರ್ ಆಫ್ ಫೈನ್ ಆಟ್ರ್ಸ್, ಸಿನಿಮ್ಯಾಟಿಕ್ ಆಟ್ರ್ಸ್, ಫಿಲ್ಮ್ ಅಂಡ್ ಟೆಲಿವಿಷನ್ ಪ್ರೊಡಕ್ಷನ್, ಸ್ಕೂಲ್ ಆಫ್ ಸಿನಿಮ್ಯಾಟಿಕ್ ಆಟ್ರ್ಸ್ ನಲ್ಲಿ ಪದವಿ ಪಡೆದಿದ್ದಾರೆ. ಸದ್ಯ ಆರ್ಯನ್ನ ಈ ಫೋಟೋವನ್ನು ಅಭಿಮಾನಿಗಳು ಶೇರ್ ಮಾಡಿಕೊಳ್ಳುವ ಮೂಲಕ ವಿಶ್ ಮಾಡುತ್ತಿದ್ದಾರೆ.
ಆರ್ಯನ್ ಖಾನ್ ಹಾಗೂ ಗೌರಿ ಖಾನ್ ಏಪ್ರಿಲ್ನಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ತಾಯಿ-ಮಗ ವಿದೇಶಕ್ಕೆ ಹಾರಿದ್ದಾರೆ ಎಂದು ನೆಟ್ಟಿಗರು ಟೀಕಿಸಿದ್ದರು. ಆದರೆ ಗೌರಿ ಖಾನ್ ಮಗನ ಪದವಿ ಪ್ರಧಾನ ಕಾರ್ಯಕ್ರಮಕ್ಕೆ ತೆರಳಿದ್ದರು. ಶಾರೂಖ್ ಪುತ್ರಿ ಸುಹಾನಖಾನ್ ಕೂಡ ನ್ಯೂಯಾರ್ಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.