ಇಸ್ಲಾಮಾಬಾದ್: ಪಾಕಿಸ್ತಾನದಿಂದ ಹಾರಿಬಂದ ಪಾರಿವಾಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಗಡಿ ಭದ್ರತಾ ಪಡೆ ಒತ್ತಾಯ ಮಾಡುತ್ತಿದೆ.
ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಒಳನುಸುಳವವರನ್ನು ಹಿಡಿದು ಪ್ರಕರಣ ದಾಖಲಿಸುವುದು ಬಿಎಸ್ಎಫ್ ಕೆಲಸ. ಆದರೆ ಈ ಬಾರಿ ಗಡಿ ಭದ್ರತಾ ಪಡೆ ಪಾರಿವಾಳ ಪಾಕಿಸ್ತಾನದಿಂದ ಭಾರತದೊಳಗೆ ಹಾರಿ ಬಂದಿದೆ. ಪಾರಿವಾಳದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದ ಮೇರೆಗೆ ಎಫ್ಐಆರ್ ದಾಖಲಿಸುವಂತೆ ಬಿಎಸ್ಎಫ್ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಅಲ್ಲದೆ ಈ ಬಗ್ಗೆ ಪಂಜಾಬ್ ಪೊಲೀಸ್ ಇಲಾಖೆಯ ಅಭಿಪ್ರಾಯ ಕೋರಿದ್ದಾರೆ.
Advertisement
Advertisement
ರೊರಾವಾಲಾ ಪೋಸ್ಟ್ನಲ್ಲಿರುವ ಗಡಿ ಭದ್ರತಾ ಪಡೆಯ ಜವಾನನ ಭುಜದ ಮೇಲೆ ಶಂಕಿತ ಪಾರಿವಾಳವೊಂದು ತಾನೇ ತಾನಾಗಿ ಬಂದು ಕೂತಿದೆ. ಈ ಪಾರಿವಾಳದ ಕಾಲಿನಲ್ಲಿ ಸಣ್ಣ ಪೇಪರ್ ತುಂಡನ್ನು ಕಟ್ಟಲಾಗಿತ್ತು. ಈ ಪೇಪರ್ ನಲ್ಲಿ ಕೆಲ ಸಂಪರ್ಕ ಸಂಖ್ಯೆಗಳನ್ನು ನಮೂದಿಸಲಾಗಿತ್ತು. ಈ ಪಾರಿವಾಳ ಗಡಿಯುದ್ದಕ್ಕೂ ಹಾರಾಟ ನಡೆಸಿತ್ತು. ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಎಸ್ಎಫ್ ಸಿಬ್ಬಂದಿ ಲಿಖಿತ ಬೇಡಿಕೆಯೊಂದಿಗೆ ಪಕ್ಷಿಯನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
Advertisement
Advertisement
ಬಿಎಸ್ಎಫ್ ಪಾರಿವಾಳದ ವಿರುದ್ಧ ಎಫ್ಐಆರ್ ನೋಂದಾಯಿಸಲು ಒತ್ತಾಯಿಸಲಾಗಿದೆ. ಪಾರಿವಾಳವು ಪಕ್ಷಿಯಾಗಿರುವುದರಿಂದ ಅದರ ವಿರುದ್ಧ ಎಫ್ಐಆರ್ ದಾಖಲಿಸಬಹುದು ಎಂದು ನಾನು ಭಾವಿಸುವುದಿಲ್ಲ. ಆದರೆ ಅವರ ಅಭಿಪ್ರಾಯಕ್ಕಾಗಿ ನಾವು ಈ ವಿಷಯವನ್ನು ನಮ್ಮ ಕಾನೂನು ತಜ್ಞರಿಗೆ ಹಸ್ತಾಂತರಿಸಿದ್ದೇವೆ. ಪಾರಿವಾಳದ ಕಾಲಿಗೆ ಟ್ಯಾಗ್ ಮಾಡಲಾದ ಸಂಖ್ಯೆಯನ್ನು ವಿಶ್ಲೇಷಿಸಲಾಗುತ್ತಿದ್ದು, ಗೂಢಚರ್ಯೆ ಯತ್ನಗಳನ್ನು ಶಂಕಿಸಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿ ಪಾರಿವಾಳಗಳನ್ನು ಸೆರೆಹಿಡಿಯಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಧ್ರುವ್ ದಹಿಯಾ ಹೇಳಿದ್ದಾರೆ.