ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಮತ್ತು ಅವನ ಸಹಚರರಿಗೆ ಎರಡು ವರ್ಷ ಜೈಲು ಶಿಕ್ಷೆಯಾಗಿದೆ.
ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛೋಟಾ ರಾಜನ್ ಮತ್ತು ಅವನ ಮೂವರು ಸಹಚರರಿಗೆ ಮುಂಬೈ ಸೆಷನ್ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
Advertisement
ಛೋಟಾ ರಾಜನ್ನನ್ನು 2015ರ ಅಕ್ಟೋಬರ್ನಲ್ಲಿ ಇಂಡೊನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ಬಂಧಿಸಿದ್ದರು. ಆತನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. 75 ಅಪರಾಧಗಳ ಪೈಕಿ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಮಹರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ 20 ಕ್ಕೂ ಹೆಚ್ಚು ಪ್ರಕರಣಗಳು ರಾಜನ್ ವಿರುದ್ಧ ದಾಖಲಾಗಿದೆ.
Advertisement
Advertisement
ಏನಿದು ಪ್ರಕರಣ:
ನಂದು ವಾಜೆಕರ್ ಎಂಬ ಬಿಲ್ಡರ್ 2015 ರಲ್ಲಿ ಪುಣೆಯಲ್ಲಿ ಜಮೀನು ಖರೀದಿಸಿದ್ದನು. ಪರಮಾನಂದ ಠಕ್ಕರ್ ಎಂಬ ಏಜೆಂಟನಿಗೆ 2 ಕೋಟಿ ಕೊಡಬೇಕಾಗಿತ್ತು. ಆದರೆ ಪರಮಾನಂದ ಠಕ್ಕರ್ ಹೆಚ್ಚಿನ ಹಣವನ್ನು ಬೇಡಿಕೆಯಿಟ್ಟಿದ್ದಾನೆ. ಈ ಬೇಡಿಕೆಗೆ ವಾಜೇಕರ್ ಒಪ್ಪಲಿಲ್ಲ. ನಂತರ ಪರಮಾನಂದ ಠಕ್ಕರ್ ಛೋಟಾ ರಾಜನ್ನನ್ನು ಸಂಪರ್ಕಿಸಿ ಈ ಡೀಲ್ ಮಾಡುವಂತೆ ಹೇಳಿದ್ದನು. ನಂತರ ಛೋಟಾ ರಾಜನ್ ಬಿಲ್ಡರ್ ನಂದು ವಾಜೆಕರ್ಗೆ 26 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದನು. ಹಣವನ್ನು ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.
Advertisement
ಛೋಟಾ ರಾಜನ್ ಹಿನ್ನೆಲೆ:
ರಾಜೇಂದ್ರ ನಿಕಲಾಜೆಯಾಗಿದ್ದವನು ಭೂಗತ ಲೋಕಕ್ಕೆ ಪ್ರವೇಶಿಸುತ್ತಿದ್ದಂತೆ ಛೋಟಾ ರಾಜನ್ ಆಗಿ ಬದಲಾದನು. 1970ರಲ್ಲಿ ಚೇಂಬೂರ್ ಬಳಿಯ ಚಿತ್ರಮಂದಿರಗಳ ಮುಂದೆ ಬ್ಲ್ಯಾಕ್ ಟಿಕೆಟ್ ಮಾರಾಟ ಮಾಡುತ್ತಿದ್ದನು. ಸಣ್ಣಪುಟ್ಟ ವ್ಯಾಪಾರ, ಕಳ್ಳಬಟ್ಟಿ ತಯಾರಿಕೆ ಹಾಗೂ ಅಪರಾಧ ಕೃತ್ಯಗಳನ್ನು ಮಾಡುತ್ತಿದ್ದನು. ಹೀಗೆ ದಾವೂದ್ ಗ್ಯಾಂಗ್ ಸೇರಿಕೊಂಡ ನಂತರ ಛೋಟಾ ರಾಜನ್ ಎಂದು ಕುಖ್ಯಾತನಾದನು.
ಛೋಟಾ ರಾಜನ್ ವಿದೇಶದಲ್ಲಿದ್ದುಕೊಂಡು ಭೂಗತ ಲೋಕದ ವ್ಯವಹಾರಗಳನ್ನು ನಿಂಯತ್ರಿಸುತ್ತಿದ್ದನು. ಮತ್ತೊಬ್ಬ ಕುಖ್ಯಾತ ಪಾತಕಿ ದಾವೂದ್ ಇಬ್ರಾಹಿಂಗೂ ಮುಂಬೈ ಭೂಗತ ಜಗತ್ತಿನ ಮೇಲೆ ಹಿಡಿತ ಸಾಧಿಸುತ್ತಿದ್ದರು. ಈ ಇಬ್ಬರ ನಡುವೆ ಪೈಪೋಟಿ ನಡೆಯುತ್ತಿತ್ತು.