– ಬೆಂಗಳೂರಲ್ಲಿ ಐದಂಕಿಗಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ರೇಟ್ ಶೇ.3.52
ಬೆಂಗಳೂರು: ರಾಜ್ಯದಲ್ಲಿ ಇಂದು 10,959 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 20,246 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವಿಟಿ ರೇಟ್ ಮತ್ತಷ್ಟು ಕಡಿಮೆಯಾಗಿದ್ದು, ಶೇ.6.68ಕ್ಕೆ ಇಳಿಕೆಯಾಗಿದೆ. ಇಂದು ಕೊರೊನಾಗೆ 192 ಜನರು ಬಲಿಯಾಗಿದ್ದು, ಮರಣ ಪ್ರಮಾಣ ದರ ಶೇ.1.75ಕ್ಕೆ ಇಳಿಕೆ ಕಂಡಿದೆ.
Advertisement
ಸದ್ಯ ರಾಜ್ಯದಲ್ಲಿ 2,15,525 ಸಕ್ರಿಯ ಪ್ರಕರಣಗಳಿವೆ. ಇಂದು 20,246 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇದುವರೆಗೂ 27,28,248 ಕೊರೊನಾ ಪ್ರಕರಣಗಳು ವರದಿಯಾಗಿವೆ.
Advertisement
Advertisement
ಇಂದು ಒಟ್ಟು 1,63,962 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 67,950 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, 2,395 ಜನಕ್ಕೆ ಸೋಂಕು ತಗುಲಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 98,125ಕ್ಕೆ ಇಳಿಕೆಯಾಗಿದ್ದು, 50 ಜನ ಸೋಂಕಿಗೆ ಬಲಿಯಾಗಿದ್ದಾರೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 96, ಬಳ್ಳಾರಿ 211, ಬೆಳಗಾವಿ 341, ಬೆಂಗಳೂರು ಗ್ರಾಮಾಂತರ 385, ಬೆಂಗಳೂರು ನಗರ 2,395, ಬೀದರ್ 9, ಚಾಮರಾಜನಗರ 254, ಚಿಕ್ಕಬಳ್ಳಾಪುರ 268, ಚಿಕ್ಕಮಗಳೂರು 339, ಚಿತ್ರದುರ್ಗ 200, ದಕ್ಷಿಣ ಕನ್ನಡ 594, ದಾವಣಗೆರೆ 227, ಧಾರವಾಡ 275, ಗದಗ 95, ಹಾಸನ 745, ಹಾವೇರಿ 97, ಕಲಬುರಗಿ 48, ಕೊಡಗು 216, ಕೋಲಾರ 239, ಕೊಪ್ಪಳ 157, ಮಂಡ್ಯ 397, ಮೈಸೂರು 1,163, ರಾಯಚೂರು 20, ರಾಮನಗರ 50, ಶಿವಮೊಗ್ಗ 562, ತುಮಕೂರು 662, ಉಡುಪಿ 413, ಉತ್ತರ ಕನ್ನಡ 312, ವಿಜಯಪುರ 158 ಮತ್ತು ಯಾದಗಿರಿಯಲ್ಲಿ 31 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.