ಗಾಂಧಿನಗರ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕಾಗಿ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಮೈದಾನ ಮೊಟೆರಾ ಭರ್ಜರಿಯಾಗಿ ಸಿದ್ಧಗೊಂಡಿದೆ.
ಗುಜರಾತ್ನ ಮೊಟೆರಾದಲ್ಲಿರುವ ಸರ್ದಾರ್ ಪಟೇಲ್ ಕ್ರೀಡಾಂಗಣ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಿದ್ದು, ಈ ಕ್ರೀಡಾಂಗಣದಲ್ಲಿ ನಡೆಯುವ ಡೇ-ನೈಟ್ ಟೆಸ್ಟ್ ಪಂದ್ಯಾಟಕ್ಕಾಗಿ ಇದೀಗ ಆಟಗಾರರು ಕೂಡ ಬಾರಿ ಉತ್ಸಾಹದಲ್ಲಿದ್ದಾರೆ.
Advertisement
Advertisement
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಪಂದ್ಯ ಫೆಬ್ರವರಿ 24 ರಿಂದ 28 ವರೆಗೆ ನಡೆಯಲಿದ್ದು, ಈಗಾಗಲೇ ಭಾರತೀಯ ಆಟಗಾರರೂ ಮೊಟೆರಾ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
Advertisement
ಮೂರನೇ ಟೆಸ್ಟ್ ಪಂದ್ಯ ಹಲವು ವಿಶೇಷಗಳಿಂದ ಕೂಡಿದ್ದು, ಈಗಾಗಲೇ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯುವ ಟೆಸ್ಟ್ ಪಂದ್ಯದ ಶೇ.50 ರಷ್ಟು ಟೆಕೆಟ್ ಕೂಡ ಸೇಲ್ ಆಗಿದೆ. ಒಟ್ಟು 1.10 ಲಕ್ಷ ಪ್ರೇಕ್ಷಕ ಗ್ಯಾಲರಿ ಸಾಮಥ್ರ್ಯ ಹೊಂದಿರುವ ಕ್ರೀಡಾಂಗಣದಲ್ಲಿ ಕೊರೊನಾ ಕಾರಣದಿಂದಾಗಿ ಶೇ.50 ಮಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.
Advertisement
ಒಟ್ಟು 63 ಎಕರೆ ಜಾಗದಲ್ಲಿ ವಿಸ್ತಾರವಾಗಿ ಹರಡಿಕೊಂಡಿರುವ ಕ್ರೀಡಾಂಗಣದ ಒಳಭಾಗದಲ್ಲಿ 76 ಕಾರ್ಪೊರೇಟ್ ಬಾಕ್ಸ್ ಗಳು, ಮೂರು ಅಭ್ಯಾಸ ಮೈದಾನಗಳು ಮತ್ತು ಸುಸಜ್ಜಿತಾ ನಾಲ್ಕು ಡ್ರೆಸ್ಸಿಂಗ್ ರೂಂ ಇದೆ. ಇನ್ನೂ ಹೊನಲು ಬೆಳಕಿನಲ್ಲಿ ಪಂದ್ಯ ನಡೆಯುವ ಕಾರಣ ನೆರಳಿನ ಬಿಂಬಗಳನ್ನು ಮರೆಮಾಚಲು ಎಲ್ಇಡಿ ಬಲ್ಬ್ ಗಳನ್ನು ಹಾಕಲಾಗಿದೆ.
ಮಳೆ ಬಂದರೆ ಪರಿಹಾರವಾಗಿ ಮೈದಾನವನ್ನು ಒಣಗಿಸಲು ಸಬ್ ಏರ್ ಸಿಸ್ಟಂ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಮಳೆ ನಿಂತು ಅರ್ಧ ಗಂಟೆಗೆ ಮೈದಾನ ಒಣಗುತ್ತದೆ. ಈ ಎಲ್ಲ ಸೌಲಭ್ಯಗಳೊಂದಿಗೆ, ವಿಶ್ವದ ಎರಡನೇ ಅತೀ ದೊಡ್ಡ ಮೈದಾನ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಮೊಟೆರಾ ಇದೀಗ ಭಾರತ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಕ್ಕೆ ಕಾತರದಿಂದ ಕಾಯುತ್ತಿದೆ ಇದೀಗ ಎಲ್ಲರ ಚಿತ್ತ ಮೊಟೆರಾ ಕ್ರೀಡಾಂಗಣದತ್ತ ನೆಟ್ಟಿದೆ.