LatestMain PostNational

ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಆಗಿಲ್ವಾ?- ಮಾರ್ಚ್ 31ರ ನಂತ್ರ ಬೀಳಲಿದೆ ಭಾರೀ ದಂಡ

ನವದೆಹಲಿ: ಸೆಕ್ಷನ್ 139ಎಎ ಪ್ರಕಾರ ಪ್ರತಿಯೊಬ್ಬ ನಾಗರಿಕನು ತನ್ನ ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿತ್ತು. ಇದೀಗ ಮಾರ್ಚ್ 31ರ ಒಳಗಾಗಿ ಆಧಾರ್ ಲಿಂಕ್ ಮಾಡಿಸದೆ ಇದ್ದಲ್ಲಿ 1,000 ರೂಪಾಯಿ ದಂಡ ವಿಧಿಸುದಾಗಿ ತಿಳಿಸಿದೆ.

ಆದಾಯ ತೆರಿಗೆ ಇಲಾಖೆ ತಿಳಿಸಿರುವ ಪ್ರಕಾರ ಈಗಾಗಲೇ ಕೊಟ್ಟಿರುವ ಕಾಲಾವಕಾಶದ ಒಳಗಾಗಿ ಯಾರೂ ತಮ್ಮ ಪ್ಯಾನ್‍ಕಾರ್ಡಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದೆ ಇರುತ್ತಾರೋ ಅಂತವರಿಗೆ 1 ಸಾವಿರ ರೂಪಾಯಿ ದಂಡ ಹಾಕಿ ಅವರ ಪ್ಯಾನ್ ಕಾರ್ಡನ್ನು ಅಮಾನ್ಯಗೊಳಿಸಲಾಗುವುದು ಎಂದು ತಿಳಿಸಿದೆ.

2021ನೇ ಹಣಕಾಸು ಮಸೂದೆಯಲ್ಲಿ ಹೊಸ ಸೆಕ್ಷನ್ 234 ಅನ್ನು ಆದಾಯ ತೆರಿಗೆ ಕಾಯ್ದೆಯಾಗಿ ರೂಪುಗೊಳಿಸಲಾಗಿದ್ದು, ಇದರ ಪ್ರಕಾರ ಮಾರ್ಚ್ 31ರ ಒಳಗಾಗಿ ಪ್ಯಾನ್ ಕಾರ್ಡ್‍ಗೆ ಆಧಾರ್ ಲಿಂಕ್ ಮಾಡದೆ ಇದ್ದರೆ ಅಂತವರಿಗೆ ದಂಡ ವಿಧಿಸಲಾಗುವುದು ಮತ್ತು ಪ್ಯಾನ್ ಕಾರ್ಡ್ ಅಮಾನ್ಯಗೊಳಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಸೂಚಿಸಿದೆ.

Leave a Reply

Your email address will not be published.

Back to top button