ಬೆಂಗಳೂರು: ಬ್ಯಾಡ್ಮಿಂಟನ್ ದಂತಕತೆ ಹಾಗೂ ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯವರ ತಂದೆ ಪ್ರಕಾಶ್ ಪಡುಕೋಣೆ ಅವರಿಗೆ ಕೊರೊನಾ ಸೋಂಕು ದೃಢವಾಗಿರುವುದರಿಂದ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ.
ಸುಮಾರು 10 ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ ಅವರ ಪತ್ನಿ ಉಜ್ವಲಾ ಮತ್ತು ದ್ವಿತೀಯ ಪುತ್ರಿ ಅನಿಶಾಗೆ ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರು ಪರೀಕ್ಷಿಸಿದಾಗ ಅವರಿಗೆ ಕೊರೊನಾ ಸೋಂಕಿರುವುದು ಕಂಡುಬಂದಿತ್ತು ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಕಾಶ್ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ. ಪ್ರಕಾಶ್ ಅವರ ಪತ್ನಿ ಮತ್ತು ಪುತ್ರಿ ಸದ್ಯ ಮನೆಯಲ್ಲಿದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ. ಲಸಿಕೆಯ ಮೊದಲ ಡೋಸ್ಅನ್ನು ಪ್ರಕಾಸ್ ಅವರು ಪಡೆದುಕೊಂಡಿದ್ದಾರೆ ಎಂದು ವಿಮಲ್ ಹೇಳಿದ್ದಾರೆ.
ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯ ನಿರ್ದೇಶಕರಾಗಿದ್ದಾರೆ. 1980ರಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದಿದ್ದರು. 1983ರಲ್ಲಿ ವಲ್ರ್ಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದ ಪಡುಕೋಣೆ ಭಾರತೀಯರ ಪರ ಈ ಪದಕ ಗೆದ್ದ ಮೊದಲ ಸಾಧಕನಾಗಿ ಗುರುತಿಸಿಕೊಂಡಿದ್ದರು.