ಬೆಂಗಳೂರು: ಪ್ರತಿಭಾವಂತ ಯುವ ಕಲಾವಿದ ಬಹಳ ಬಹಳ ಬೇಗ ಅಗಲಿದ್ದಾನೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ, ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಕಂಬನಿ ಮಿಡಿದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಚಿರಂಜೀವಿ ಸರ್ಜಾ ಮೃತಪಟ್ಟ ಸುದ್ದಿ ಕೇಳಿ ಶಾಕ್ ಆಯ್ತು ಮತ್ತು ಬೇಸರವಾಯ್ತು. ಬಹಳ ಬೇಗ ಪ್ರತಿಭಾವಂತ ಯುವ ಕಲಾವಿದ ಅಗಲಿದ್ದಾನೆ. ಅವರ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ದು:ಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.
Advertisement
Deeply saddened and shocked to hear the passing away of #ChiranjeeviSarja. A young talent gone too soon. Condolences to his family and friends.
— Anil Kumble (@anilkumble1074) June 7, 2020
Advertisement
ಟೀಂ ಇಂಡಿಯಾ ಆಟಗಾರ್ತಿ ವೇದ ಕೃಷ್ಣಮೂರ್ತಿ ಟ್ವಿಟ್ಟರ್ ನಲ್ಲಿ ಕಂಬನಿ ಮಿಡಿದಿದ್ದಾರೆ. ಚಿರಂಜೀವ್ ಮೃತಪಟ್ಟಿರುವ ಸುದ್ದಿ ಕೇಳಿ ಶಾಕ್ ಆದೆ. ಬಹಳ ಉತ್ತಮ ವ್ಯಕ್ತಿಯಾಗಿದ್ದರು. ಕುಟುಂಬಸ್ಥರಿಗೆ ಮತ್ತು ಸ್ನೇಹಿತರಿಗೆ ದು:ಖ ಬರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.
Advertisement
Beyond shocked to hear about the sudden demise of #ChiranjeeviSarja. He was such a kind person. My heartfelt condolences to his family & friends. May his soul RIP ???????? pic.twitter.com/CFiyBXYCkA
— Veda Krishnamurthy (@vedakmurthy08) June 7, 2020
Advertisement
ಇಂದು ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿದೆ. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಾರೆ. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದಾರೆ.
ಚಿರು ಅವರ ಸಾವಿನ ಸುದ್ದಿ ಕೇಳಿ ಇಡೀ ಚಿತ್ರರಂಗವೇ ಶಾಕ್ ಆಗಿದೆ. ಜೊತೆಗೆ ನಟರಾದ ದರ್ಶನ್, ಪುನೀತ್ ರಾಜ್ಕುಮಾರ್, ಗಣೇಶ್, ನಟಿ ಅಮೂಲ್ಯ ಮುಂತಾದ ಕಲಾವಿದರ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನೂ ನಟಿ ತರಾ, ಸೃಜನ್ ಲೋಕೇಶ್, ಕಿಚ್ಚ ಸುದೀಪ್ ಅವರು ಆಸ್ಪತ್ರೆಗೆ ಬಂದು ಚಿರುವಿನ ಅಂತಿಮ ದರ್ಶನ ಪಡೆದಿದ್ದಾರೆ. ಚಿರು ಅವರ ಹುಟ್ಟೂರು ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.