ಮಾಸ್ಕೋ: ಮೂವರು ಸಿಬ್ಬಂದಿ ಹಾಗೂ 13 ಮಂದಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ Mi-8 ಹೆಲಿಕಾಪ್ಟರ್ ರಷ್ಯಾದ ಕಮ್ಚಟ್ಕಾ ಪ್ರದೇಶದಲ್ಲಿ ಪತನಗೊಂಡಿದೆ.
ಮೂಲಗಳ ಪ್ರಕಾರ ಹೆಲಿಕಾಪ್ಟರ್ನಲ್ಲಿದ್ದ 8 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಮತ್ತು ಉಳಿದ ಎಂಟು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ತಕ್ಷಣಕ್ಕೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.
Advertisement
Advertisement
ಆಗಸ್ಟ್ 12ರ ಬುಧವಾರ ಕ್ರೊನೊಟ್ಸ್ಕಿ ನೇಚರ್ ರೀಸರ್ವ್ ಬಳಿ ವಿಟಜ್-ಏರೋ ವಿಮಾನಯಾನ ಸಂಸ್ಥೆಯ Mi-8 ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ದೊರೆತಿದೆ ಎಂದು ರಷ್ಯಾದ ತುರ್ತು ಸಚಿವಾಲಯ ತಿಳಿಸಿದೆ. ಸದ್ಯ ಕಮ್ಚಟ್ಕಾದ ಗವರ್ನರ್ ವ್ಲಾಡಿಮಿರ್ ಸೊಲೊಡೋವ್ ಅಪಘಾತ ಸ್ಥಳಕ್ಕೆ ವೈದ್ಯಕೀಯ ಹಾಗೂ ತುರ್ತು ಸೇವಾ ಸಿಬ್ಬಂದಿಯೊಟ್ಟಿಗೆ ಭೇಟಿ ನೀಡಿದ್ದರು. ಜೊತೆಗೆ ಪ್ರಾದೇಶಿಕ ಅಭಿಯೋಜಕರು ವಿಮಾನ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Advertisement
Advertisement
ಅಪಘಾತಕ್ಕೀಡಾದ ಹೆಲಿಕಾಪ್ಟರ್ನನ್ನು 37 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದು, ಇತ್ತೀಚೆಗಷ್ಟೇ ಈ ಹೆಲಿಕಾಪ್ಟರ್ ನಿರ್ವಹಿಸಲು ಉತ್ತಮ ಸ್ಥಿತಿಯಲ್ಲಿದೆ ಎಂದು ತಿಳಿಸಲಾಗಿತ್ತು. ಇದನ್ನೂ ಓದಿ:ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲಿಯೇ ಸಾವು