– ಜಿಲ್ಲಾಡಳಿತ ಹಿರಿಯ ಅಧಿಕಾರಿಗಳ ಜೊತೆಗೆ ಸಿಎಂ ವೀಡಿಯೋ ಸಂವಾದ
ಯಾದಗಿರಿ: ಮಹಾರಾಷ್ಟ್ರದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜೊತೆಗೆ ಸಿಎಂ ಯಡಿಯೂರಪ್ಪನವರು ವೀಡಿಯೋ ಸಂವಾದ ಮೂಲಕ ಸೂಚನೆ ನೀಡಿದ್ದಾರೆ.
Advertisement
ಜಿಲ್ಲಾಧಿಕಾರಿ ಡಾ.ರಾಗಾಪ್ರಿಯರೊಂದಿಗೆ ವೀಡಿಯೋ ಸಂವಾದ ನಡೆಸಿದ ಯಡಿಯೂರಪ್ಪನವರು, ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ದರಾಗಬೇಕು, ಸಹಾಯವಾಣಿ ಕೇಂದ್ರ, ಕಾಳಜಿ ಕೇಂದ್ರ ಆರಂಭ ಜೊತೆಗೆ ಅಗತ್ಯ ತಯಾರಿ ಮಾಡಿಕೊಂಡು ಎಲ್ಲಾ ರೀತಿಯ ಸಿದ್ಧತೆಯಲ್ಲಿ ತೊಡಗಿಕೊಳ್ಳಿ ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಅನ್ಲಾಕ್ ಬೆನ್ನಲ್ಲೇ ಮತ್ತೆ ಮಹಾನಗರಗಳತ್ತ ಯಾದಗಿರಿ ಜನರ ಮಹಾ ವಲಸೆ
Advertisement
Advertisement
ವೀಡಿಯೋ ಸಂವಾದದ ವೇಳೆ ಡಿಸಿ ರಾಗಪ್ರಿಯ ಜಿಲ್ಲಾಡಳಿತ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಾದದ ವ್ಯವಸ್ಥೆ ಮಾಡಲಾಗಿತ್ತು. ಸಂವಾದದಲ್ಲಿ ಸಿಎಸ್ ಪಿ ವೇದಮೂರ್ತಿ, ಜಿ.ಪಂ ಸಿಇಓ ಶಿಲ್ಲಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
Advertisement