ಮಂಗಳೂರು: ಬಜಾಲ್, ಜಲ್ಲಿಗುಡ್ಡೆ ಪ್ರದೇಶದಲ್ಲಿ ಕೊರೊನಾ ಪೀಡಿತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ ಸುಮಾರು 50 ಕುಟುಂಬಗಳಿಗೆ ದಿನಸಿ ಅಕ್ಕಿ ಕಿಟ್ ವಿತರಿಸಲಾಯಿತು. ಮಾಜಿ ಶಾಸಕ ಐವನ್ ಡಿಸೋಜ ಅವರ ನೇತೃತ್ವದಲ್ಲಿ ಈ ಹಂಚಿಕೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿಸೋಜ ಅವರು, ಕೊರೊನಾ ತಡೆಗಟ್ಟಲು ಪ್ರತಿಯೊಬ್ಬರೂ ತನ್ನದೇ ಅದ ಕೊಡುಗೆಯನ್ನು ನೀಡಬೇಕು. ಅಂತರವನ್ನು ಕಾಪಾಡಬೇಕು. ಸರ್ಕಾರ ಕೊಟ್ಟಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಅದನ್ನು ಪಡೆಯುವ ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಮಂಗಳೂರಿನ ಕುಪ್ಪೆಪದವಿನಲ್ಲಿ ಗುಡ್ಡ ಕುಸಿತ- ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ
Advertisement
ಅಸಂಘಟಿತ ಕಾರ್ಮಿಕರಿಗೆ ಕೊರೊನಾ ಲಸಿಕೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ದೃಷ್ಟಿಯಲ್ಲಿ ಆರೋಗ್ಯ ಇಲಾಖೆಯನ್ನು ಈಗಾಗಲೇ ಒತ್ತಾಯಿಸಲಾಗಿದೆ ಎಂದರು.
Advertisement
Advertisement
ಕಾರ್ಯಕ್ರಮದಲ್ಲಿ ನಾಗೇಂದ್ರ ಕುಮಾರ್, ಭಾಸ್ಕರ್ ರಾವ್, ಎ ಸಿ.ಜಯರಾಜ್, ಜ್ಯೋತಿ ಪಡೀಲ್, ದೀಕ್ಷಿತ್ ಅತ್ತಾವರ, ಮೀನಾ ತೆಲ್ಲಿಸ್, ಅಭಿಬಲ್ಲ ಕಣ್ಣೂರು, ಭಾಜಿಲ್, ಸ್ಥಳೀಯ ವಾರ್ಡ್ ಅಧ್ಯಕ್ಷ ಆನಂದ ಬಜಾಲ್, ಮೇಜಿ ಡಿ ಸೋಜ ಮುಂತಾದವರು ಉಪಸ್ಥಿತರಿದ್ದರು.