ಬೀದರ್‌ನಲ್ಲಿ ಕೊರೊನಾಗೆ ಮತ್ತೊಬ್ಬ ಬಲಿ- ಸಾವಿರದ ಆಸುಪಾಸಿನಲ್ಲಿ ಸೋಂಕಿತರ ಸಂಖ್ಯೆ

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಕೊರೊನಾಗೆ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಉಸಿರಾಟ ಹಾಗೂ ಜ್ವರದಿಂದ ಬಳಲುತ್ತಿದ್ದ ಬೀದರ್‍ನ ಓಲ್ಡ್ ಸಿಟಿಯ 40 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೆ ಇಂದು 63 ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಡವಾಗಿವೆ. ಹುಮ್ನಬಾದ್ 39, ಬಾಲ್ಕಿ 8, ಕಮಲಾನಗರ 8, ಔರಾದ್ 4, ಬಸವಕಲ್ಯಾಣದಲ್ಲಿ 4 ಸೇರಿದಂತೆ ಒಟ್ಟು 63 ಜನರಿಗೆ ಸೋಂಕು ತಗುಲಿದೆ.

- Advertisement -

ಬಹುತೇಕರಿಗೆ ಕಂಟೈನ್ಮೆಂಟ್ ಝೋನ್ ಸಂಪರ್ಕ, ಪ್ರಾಥಮಿಕ ಸಂಪರ್ಕದಿಂದಾಗಿ ಸೋಂಕು ಧೃಡವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 976ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 591 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನೂ 332 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಕರಣಗಳು ಸಾವಿರದ ಗಡಿ ಸಮೀಪಿಸುತ್ತಿರುವ ಹಿನ್ನೆಲೆ ಜಿಲ್ಲೆಯ ಜನತೆ ಆತಂಕ್ಕೀಡಾಗಿದ್ದಾರೆ.

- Advertisement -