– ಶೀಘ್ರ ಚೇತರಿಕೆಗೆ ಶ್ರೀರಾಮುಲು ಹಾರೈಕೆ
ಚೆನ್ನೈ: ಬಹುಭಾಷಾ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಗಾಯಕರೇ ತಿಳಿಸಿದ್ದು, ಆರೋಗ್ಯದ ಬಗ್ಗೆ ಯಾರೂ ಆತಂಕ ಪಡಬೇಡಿ ಎಂದು ಹೇಳಿದ್ದಾರೆ.
Advertisement
ಈ ಸಂಬಂಧ ಆಸ್ಪತ್ರೆಯಿಂದಲೇ ಫೇಸ್ಬುಕ್ ವಿಡಿಯೋ ಮಾಡಿರುವ ಗಾಯಕ, ಜ್ವರ, ಶೀತ ಹಾಗೂ ಎದೆನೋವು ಕಾಣಿಸಿಕೊಂಡಿದ್ದು, ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಂಡೆ. ಈ ವೇಳೆ ವರದಿ ಪಾಸಿಟಿವ್ ಎಂದು ಬಂದಿದೆ. ವೈದ್ಯರು ಮನೆಯಲ್ಲೇ ಐಸೋಲೇಟ್ ಆಗಲು ತಿಳಿಸಿದರು. ಆದರೆ ನಾನು ಚೈಲೂಮೇಡುನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.
Advertisement
Advertisement
ಸದ್ಯ ಜ್ವರ ಕಡಿಮೆಯಾಗಿದ್ದು, ಸ್ವಲ್ಪ ಶೀತ ಇದೆ. ಇನ್ನೇನು ಎರಡು ದಿನದಲ್ಲಿ ಕಡಿಮೆಯಾಗಬಹುದು. ಸದ್ಯ ಆರೋಗ್ಯ ಸುಧಾರಿಸಿಕೊಳ್ಳುತ್ತಿದ್ದು, ವೈದ್ಯರು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ತನ್ನ ಸಂಪರ್ಕದಲ್ಲಿದ್ದವರನ್ನು ಈ ಕೂಡಲೇ ಪರೀಕ್ಷೆ ಮಾಡಿಕೊಳ್ಳಲು ವಿನಂತಿಸಿಕೊಂಡಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವುದಾಗಿ ಎಸ್ಪಿಬಿ ತಿಳಿಸಿದ್ದಾರೆ.
Advertisement
ಬಹುಭಾಷಾ ಗಾಯಕರಾದ ಗಾನ ಗಂಧರ್ವ ಶ್ರೀ #SPBalasubrahmanyam ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ.
ಮದ್ರಾಸಿನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ತಮ್ಮ ಆರೋಗ್ಯದ ಕುರಿತು ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಸ್ವತಃ ತಿಳಿಸಿರುವ ನಮ್ಮೆಲ್ಲರ ಪ್ರೀತಿಯ ಗಾಯಕ, ಶ್ರೀಯುತ ಎಸ್ ಪಿಬಿ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. pic.twitter.com/HJEE0P8Qoc
— B Sriramulu (@sriramulubjp) August 5, 2020
ಗಾಯಕರಿಗೆ ಕೊರೊನಾ ಬಂದಿರುವ ವಿಚಾರವಾಗಿ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ, ಬಹುಭಾಷಾ ಗಾಯಕರಾದ ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮದ್ರಾಸಿನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಆರೋಗ್ಯದ ಕುರಿತು ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಹೇಳಿದ್ದಾರೆ. ನಮ್ಮೆಲ್ಲರ ಪ್ರೀತಿಯ ಗಾಯಕ, ಶ್ರೀಯುತ ಎಸ್ ಪಿಬಿ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಅಂತ ಸಚಿವರು ಬರೆದುಕೊಂಡಿದ್ದಾರೆ.