ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ನನ್ನನ್ನು ವಿಲನ್ ಮಾಡಬೇಡಿ, ಅವರ ವಿರುದ್ಧ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
Advertisement
ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಯೋಗೇಶ್ವರ್, ಬಿಎಸ್ ವೈ ಅವರು ನಮ್ಮ ನಾಯಕರು. ಅವರನ್ನು ನಾವ ಟಾರ್ಗೆಟ್ ಮಾಡಲ್ಲ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನೂ ನಾವು ಮಾಡುತ್ತಿಲ್ಲ. ನಮ್ಮ ದೆಹಲಿ ಭೇಟಿ ವಿಚಾರ, ನಮ್ಮಲ್ಲಿ ಆಂತರಿಕ ಸಮಸ್ಯೆಗಳು ಇವೆ. ಹಾಗಾಗಿ ನಾಯಕರ ಮುಂದೆ ಹೇಳಿಕೊಳ್ಳಲು ಹೋಗುತ್ತಿದ್ದೇವೆ ವಿನಃ ಬೇರೆ ವಿಷಯವಲ್ಲ ಎಂದರು.
Advertisement
Advertisement
ಶಾಸಕ ಯತ್ನಾಳ್ ಹಾಗೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ವಿಚಾರವಾಗಿ, ಪ್ರವಾಸೋದ್ಯಮ ಇಲಾಖೆ ಮೂಲಕವೇ ರಾಜ್ಯದಲ್ಲಿ ನಾಲ್ಕು ಕಡೆ ತ್ರಿ ಸ್ಟಾರ್ ಹೋಟೆಲ್ ಕಟ್ಟಲು ನಿರ್ಧರಿಸಿದ್ದೇವೆ. ಹಾಗಾಗಿ ಕಲಬುರ್ಗಿಯಲ್ಲಿ ಹೋಟೆಲ್ ಆರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸುವ ಸಂಬಂಧ ಭೇಟಿ ಮಾಡಿರುವೆ. ಅವರ ಕ್ಷೇತ್ರದಲ್ಲಿ ತೆರಳುವಾಗ ಭೇಟಿ ಮಾಡಿರುವೆ ಅಷ್ಟೇ ಮತ್ತೆ ಬೇರೆ ವಿಚಾರವಿಲ್ಲ. ಯತ್ನಾಳ್ ಹಾಗೂ ನಾವು ಸಮಕಾಲಿನರು ಹಾಗಾಗಿ ಅವರನ್ನು ಭೇಟಿ ಮಾಡಿದ್ದೇನೆ. ಮತ್ತ್ಯಾವ ವಿಚಾರವೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟರೆ ಪರಿಹಾರ ನೀಡಿ – ಸುಪ್ರೀಂ ಮಹತ್ವದ ಆದೇಶ
Advertisement
ನಾವು ಪರೀಕ್ಷೆ ಬರೆದಿದ್ದೇವೆ. ಫಲಿತಾಂಶ ಯಾವಾಗ ಬರುತ್ತೆ ಎಂದು ನೋಡೋಣ. ಪಕ್ಷದ ಹಿರಿಯರು ಯಾವಾಗ ತೀರ್ಮಾನ ಮಾಡ್ತಾರೋ ಆವಾಗ ಬರುತ್ತದೆ ಎಂದರು. ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಮೂವರಿಂದ ಅನ್ಯಾಯವಾಗಿದೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಅವರ ದೆಹಲಿ ಭೇಟಿ ವಿಷಯವೂ ನನಗೆ ಗೊತ್ತಿಲ್ಲ. ಇಲಾಖೆ ಕಾರ್ಯಕ್ರಮದ ನಿಮಿತ ನಾನು ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದೇನೆ. ಸುಮ್ಮನೆ ನನ್ನ ಭೇಟಿ ವಿಚಾರ ಬೇರೆಯದಕ್ಕೆ ತಳುಕು ಹಾಕಬೇಡಿ ಎಂದು ತಿಳಿಸಿದರು.
ದೇವಸ್ಥಾನ ಆರಂಭವಾಗದಿದ್ದರೂ ನಿಯಮ ಉಲ್ಲಂಘಿಸಿ ದೇವಸ್ಥಾನಕ್ಕೆ ಭೇಟಿ ನೀಡಿದ ವಿಚಾರದಲ್ಲಿ ನಾವು ಲಾಕ್ಡೌನ್ ಓಪನ್ ಆದ ಬಳಿಕ ಇಲ್ಲಿಗೆ ಬಂದಿದ್ದೇವೆ. ಜನರು ಯಾರೂ ಒಳ ಬಂದಿಲ್ಲ ನಾವು ಮಾತ್ರ ತೆರಳಿದ್ದು ಇಲಾಖೆ ಅಭಿವೃದ್ಧಿ ವಿಚಾರ ಚರ್ಚೆ ಮಾಡಲು ಬಂದಿದ್ದೇವೆ. ನಾವು ಯಾವ ನಿಯಮವನ್ನೂ ಉಲ್ಲಂಘನೆ ಮಾಡಿಲ್ಲ. ಅಂಜನಾದ್ರಿ ಅಭಿವೃದ್ಧಿಗೆ ಸಾವಿರಾರು ಕೋಟಿ ಬೇಕಾಗಿದೆ. ಅಂಜನಾದ್ರಿ ಬೆಟ್ಟವನ್ನು ಕೇವಲ ಪ್ರವಾಸೋದ್ಯಮಯೊಂದೇ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ನಾಲ್ಕಾರು ಇಲಾಖೆ ಸಹಯೋಗದಲ್ಲಿ ನಾವು ಅಭಿವೃದ್ಧಿ ಮಾಡಬೇಕಿದೆ. ಇದಕ್ಕೆ ಸಾವಿರಾರು ಕೋಟಿ ರೂಪಾಯಿ ಬೇಕಾಗುತ್ತದೆ. ಇಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದೆ. ಈ ದೃಷ್ಟಿಯಿಂದ ನಾವು ಹಲವು ಸಚಿವರು ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಅಂಜನಾದ್ರಿಯಲ್ಲಿಯೇ ಹನುಮಂತ ಜನಿಸಿದ್ದು ಎನ್ನುವುದಕ್ಕೆ ಇಲ್ಲಿ ಹಲವು ಸಾಕ್ಷಿ, ಪುರಾವೆಗಳಿವೆ. ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಸುಮ್ಮನೆ ಯಾರೋ ಹೇಳುತ್ತಾರೆ ಎಂದು ನಾವು ಸುಮ್ಮನಿರೋದಲ್ಲ. ಅಂಜನಾದ್ರಿಯಲ್ಲಿಯೇ ಹನುಮಂತ ಜನಿಸಿದ್ದು ಎನ್ನುವುದಕ್ಕೆ ಹಲವು ಸಾಕ್ಷ್ಯ ಇವೆ. ಸರ್ಕಾರದ ನಿಲುವೂ ಇದೇ ಆಗಿದೆ. ಅಂಜನಾದ್ರಿ ಮಾಸ್ಟರ್ ಪ್ಲ್ಯಾನ್ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ದವಿದೆ ಎಂದರು.