ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮಹಾಮಾರಿ ಕೊರೊನಾ ಸೋಂಕು ಧೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅತೀ ಶೀಘ್ರವೇ ಗುಣಮುಖರಾಗಲೆಂದು ಬಿಎಸ್ವೈ ಶಿಷ್ಯ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರೂ ಆಗಿರುವ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಕುಟುಂಬ ಸಮೇತರಾಗಿ ಮಂಗಳೂರಿನ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀಸೋಮನಾಥೇಶ್ವರ ದೇವಸ್ಥಾನದಲ್ಲಿ ಸೋಮವಾರದಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S.Yediyurappa (@BSYBJP) August 2, 2020
Advertisement
ಈ ವೇಳೆ ಪ್ರತಿಕ್ರಿಯಿಸಿದ ರವೀಂದ್ರ ಶೆಟ್ಟಿ, ಮುಖ್ಯಮಂತ್ರಿಗಳಿಗೆ ಕೊರೊನಾ ತಗಲಿರುವ ವಿಷಯ ತಿಳಿದು ಆಘಾತವಾಯಿತು. ದಿನವಿಡೀ ರಾಜ್ಯದ ಜನರ ಆರೋಗ್ಯಕ್ಕಾಗಿ, ಅಭಿವೃದ್ಧಿ ಕೆಲಸಗಳ ಕಡೆ ಗಮನ ನೀಡಿ ತನ್ನ ಸಚಿವ ಸಂಪುಟದ ಮಂತ್ರಿಗಳೊಂದಿಗೆ, ಸರ್ಕಾರದ ಅಧಿಕಾರಿಗಳೊಂದಿಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಮೇಲಿಂದ ಮೇಲೆ ಸಭೆಗಳನ್ನು ನಡೆಸಿದ್ದಾರೆ. ಅಲ್ಲದೆ ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೊರೊನಾದ ಸಂಕಷ್ಟದ ಪರಿಸ್ಥಿತಿಯಲ್ಲೂ ರಾಜ್ಯದ ಜನತೆಗೆ ದಕ್ಷ ಆಡಳಿತವನ್ನು ನೀಡಲು ಹಗಲಿರುಳು ಚಿಂತನೆ ನಡೆಸುತ್ತಿರುವ ಅವರು ಶೀಘ್ರದಲ್ಲಿ ಕೊರೋನಾದಿಂದ ಗುಣಮುಖರಾಗಿ ಜನ ಸೇವೆಯಲ್ಲಿ ಮತ್ತೆ ತೊಡಗುವಂತೆ ಸೋಮನಾಥ ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು.
Advertisement
Advertisement
ಆಗಸ್ಟ್ 2 ರಂದು ರಾತ್ರಿ 11 ಗಂಟೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ದಾಖಲಿಸಿಕೊಳ್ಳಲಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
Advertisement
After being hospitalised on the advice of doctors, I am in good spirits with mild symptoms. I am grateful for all your good wishes & blessings and will get back to my duties soon. I urge everyone to wear masks, maintain social distance & take all precautions to fight Corona. pic.twitter.com/kmrIkJ02Cq
— B.S.Yediyurappa (@BSYBJP) August 3, 2020