ಹಾವೇರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಎರಡು ವರ್ಷ ಬಿಜೆಪಿ ಸರ್ಕಾರ ಇರುತ್ತದೆ ಎಂದು ಹೇಳಿದ್ದಾರೋ ಹೊರತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೇ ಸಿಎಂ ಸ್ಥಾನದಲ್ಲಿ ಇರುತ್ತಾರೆ ಎಂದು ಘೋಷಿಸಿಲ್ಲ ಎಂದು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
Advertisement
ಹಾವೇರಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಸಿದ್ದರಾಮಯ್ಯನವರ ಜೊತೆ ಬಹಳ ಆಪ್ತರಾಗಿದ್ದಾರೆ. ಹಾಗಾಗಿ ಯಡಿಯೂರಪ್ಪ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎಂಬುದು ಅವರಿಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ, ಜಾರ್ಜ್, ಜಮೀರ್ ಅಹಮ್ಮದ್ ಖಾನ್ ಎಲ್ಲರೂ ಬಹಳ ಆಪ್ತರು. ಅಮಿತ್ ಶಾ ಎರಡೂವರೆ ವರ್ಷ ಬಿಜೆಪಿ ಸರ್ಕಾರ ಇರುತ್ತದೆ ಎಂದು ಹೇಳಿದ್ದಾರೆ. ಆದರೆ ಯಡಿಯೂರಪ್ಪನವರೆ ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ ಎಂದು ಎಲ್ಲೂ ಹೇಳಿಲ್ಲ ಎಂದು ಹೇಳಿದರು.
Advertisement
Advertisement
ರಾಜ್ಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ನಾನು ಸಚಿವ ಸ್ಥಾನ ಕೇಳಿಲ್ಲ. ಯಾವ್ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ, ಅಂತಹ ಕಡೆಗಳಲ್ಲಿ ಸಚಿವ ಸ್ಥಾನ ನೀಡುವಂತೆ ಹೇಳಿದ್ದೇನೆ. ಸಚಿವ ಸ್ಥಾನ ಕೊಟ್ಟರೂ ತೆಗೆದುಕೊಳ್ಳುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದರು.
Advertisement
ಇದೇ ವೇಳೆ ಸಿಡಿ ವಿಚಾರವಾಗಿ ನಾನು ಏನು ಹೇಳಿಲ್ಲ. ನಾನು ಶರಣರ ವಚನಗಳ ಸಿಡಿ ನೋಡುತ್ತೇನೆ ಹೊರತು ಅಂತಹ ಸಿಡಿಗಳನ್ನು ನೋಡುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದನ್ನು ನಾನು ಹೇಳಿದ್ದೇನೆ ಅಷ್ಟೇ ಎಂದು ಪ್ರತಿಕ್ರಿಯಿಸಿದರು.
ಸದ್ಯ ಈಗ ಮೋದಿಯವರ ಗಾಳಿ ಇರುವುದರಿಂದ ವಲಸಿಗ ಶಾಸಕರು ಮೋದಿಯವರಿಗೆ ಜೈ ಅಂತಿದ್ದಾರೆ. ನಾಳೆ ಗಾಳಿ ಬೇರೆಯಾದರೆ ಸೋನಿಯಾಕಿ ಜೈಕಾರ ಹಾಕುತ್ತಾರೆ. ದೇವೇಗೌಡ ಅಪ್ಪಾಜಿ ಎಂದು ಕೂಡ ಕರೆಯುತ್ತಾರೆ. ವಲಸಿಗ ಶಾಸಕರು ಈಗ ಮೂಲ ಬಿಜೆಪಿ ಶಾಸಕರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳುತ್ತಾ ಇದೇ ವೇಳೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅಲ್ಲ, ಅವರು ಉಪಾದ್ಯಾಪಿ ಠಾಕ್ರಿ. ಚುನಾವಣಾ ಸ್ಟಂಟ್ ಗಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದರು.