– ಜಾರ್ಖಂಡ್‍ನ ಟಾಟಾನಗರದಿಂದ ಹೊರಟಿದ್ದ ರೈಲು
– 30 ಗಂಟೆ ಪ್ರಯಾಣಿಸಿ ಬೆಳಗ್ಗೆ ಬೆಂಗಳೂರಿಗೆ ಆಗಮನ
ಬೆಂಗಳೂರು: ಕರ್ನಾಟಕದ ಕೋವಿಡ್ 19 ಸೋಂಕಿತರಿಗೆ ಸಹಾಯವಾಗಲೆಂದು ಜಾರ್ಖಂಡ್ ನಿಂದ ಹೊರಟಿದ್ದ ಮೊದಲ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿಗೆ ಇಂದು ಬೆಳಗ್ಗೆ 9 ಗಂಟೆಗೆ ಆಗಮಿಸಿದೆ.
ಜಾರ್ಖಂಡ್ ರಾಜ್ಯದ ಟಾಟಾ ನಗರದಿಂದ ಸೋಮವಾರ ಬೆಳಗ್ಗೆ 3 ಗಂಟೆಗೆ ಹೊರಟಿದ್ದ ರೈಲು 30 ಗಂಟೆಯಲ್ಲಿ ಕ್ರಮಿಸಿ ಬೆಂಗಳೂರಿಗೆ ಆಗಮಿಸಿದೆ. ಆಕ್ಸಿಜನ್ ಹೊತ್ತ ರೈಲಿನ ಸಂಚಾರಕ್ಕೆ ಗ್ರಿನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು.
Advertisement
Advertisement
ಪ್ರತಿ ಕಂಟೇನರ್20 ಟನ್ ಸಾಮರ್ಥ್ಯ ಹೊಂದಿದ್ದು, ಒಟ್ಟು 120 ಟನ್ ಲಿಕ್ವಿಡ್ ಆಕ್ಸಿಜನ್ ಹೊತ್ತುಕೊಂಡು ಬಂದಿದ್ದ ರೈಲು ಇಂದು ಬೆಳಗ್ಗೆ ವೈಟ್ ಫೀಲ್ಡ್ ನಲ್ಲಿರುವ ಕಂಟೇನರ್ ಕಾರ್ಪೋರೇಷನ್ ಆಫ್ ಇಂಡಿಯಾ ಡಿಪೋವನ್ನು ತಲುಪಿದೆ.
Advertisement
6 ಕಂಟೈನರ್ ಮೆಡಿಕಲ್ ಆಕ್ಸಿಜನ್ ಹೊತ್ತುಕೊಂಡು ಬರುತ್ತಿರುವ ರೈಲಿನ ವಿಡಿಯೋವನ್ನು ಕೇಂದ್ರ ಸಚಿವ ಪಿಯೂಶ್ ಗೋಯಲ್ ಟ್ವೀಟ್ ಮಾಡಿದ್ದಾರೆ.
Advertisement
ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಕಳೆದ ವಾರ ಎತ್ತಿ ಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾ. ಚಂದ್ರಚೂಡ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಅತ್ಯುತ್ತಮ ಆದೇಶ ನೀಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು.
In order to provide relief to COVID-19 patients, #OxygenExpress from Tatanagar has reached Bengaluru via Green corridor, with 6 containers of medical Oxygen. pic.twitter.com/aBozcAEEUt
— Piyush Goyal (@PiyushGoyal) May 11, 2021
ರಾಜ್ಯದಲ್ಲಿ ಜನರು ಆಕ್ಸಿಜನ್ ಕೊರತೆಯಿಂದ ಸಾಯುತ್ತಿರುವುದನ್ನು ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ಹೈಕೋರ್ಟ್ ನೀಡಿರುವ ಆದೇಶಕ್ಕೆ ನಾವು ತಡೆ ನೀಡುವುದಿಲ್ಲ. ಒಂದು ವೇಳೆ ತಡೆ ನೀಡಿದರೆ ಕರ್ನಾಟಕದ ಜನರು ಆಕ್ಸಿಜನ್ ಇಲ್ಲದೇ ತತ್ತರಿಸಿ ಹೋಗಲಿದ್ದಾರೆ. ಹೀಗಾಗಿ ಕರ್ನಾಟಕಕ್ಕೆ ಆಕ್ಸಿಜನ್ ಕೋಟಾವನ್ನು ನಾಲ್ಕು ದಿನಗಳಲ್ಲಿ ಹೆಚ್ಚಿಸಬೇಕು ಎಂದು ಮೇ 7 ರಂದು ಕೇಂದ್ರಕ್ಕೆ ಆದೇಶಿಸಿತ್ತು.