ಬೆಂಗಳೂರು: ರಾಮಮೂರ್ತಿ ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಸಂಬಂಧಿಸಿದಂತೆ ಆರೋಪಿಗಳನ್ನು ಸ್ಥಳ ಮಹಾಜರ್ ಗೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಕಾಮುಕರ ಕಾಲಿಗೆ ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
10 ದಿನಗಳ ಹಿಂದೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಕೇಸ್ಗೆ ಸಂಬಂಧಿಸಿದಂತೆ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಮತ್ತು ಹಕೀಲ್ನ್ನು ರಾಮಮೂರ್ತಿ ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದರು. ಬಳಿಕ ಇಂದು ರೇಪ್ ನಡೆದ ಸ್ಥಳಕ್ಕೆ ಆರೋಪಿಗಳನ್ನು ಸ್ಥಳ ಮಹಾಜರ್ಗೆ ಕರೆದುಕೊಂಡು ಹೋದಾಗ ಆರೋಪಿಗಳು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕ ನಗರದ ಚನ್ನ ಸಂದ್ರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಸಂದರ್ಭ ಪೊಲೀಸರು, ಆರೋಪಿಗಳಾದ ಸಾಗರ್ ಮತ್ತು ರಿದಾಯ್ ಬಾಬು ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ. ಬೆಂಗ್ಳೂರಿನಲ್ಲೊಂದು ನಿರ್ಭಯಾ ಪ್ರಕರಣ – ಅತ್ಯಾಚಾರಗೈದು ಗುಪ್ತಾಂಗಕ್ಕೆ ಬಾಟಲ್ ಇರಿಸಿ ವಿಕೃತಿ!
Advertisement
Advertisement
ಘಟನ ಸ್ಥಳಕ್ಕೆ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಬೇಟಿ ಪರಿಶೀಲನೆ ನಡೆಸಿದ್ದಾರೆ. ಪಿಎಸ್ಐ ಆರ್. ಅರವಿಂದ್ ಅವರು ಆರೋಪಿಗೆ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿಗಳು ವಾಸವಾಗಿದ್ದ ಮನೆಯ ಪಕ್ಕದಲ್ಲೇ ಆರೋಪಿಗಳ ಕಾಲಿಗೆ ಗುಂಡು ಹೊಡೆಯಲಾಗಿದೆ.
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೇರಳದ ಕ್ಯಾಲಿಕಟ್ ನಲ್ಲಿರೋದನ್ನು ಪತ್ತೆ ಹಚ್ಚಿರುವ ಪೊಲೀಸರು, ಬಾಣವಾಡಿ ಇನ್ಸ್ಪೆಕ್ಟರ್ ಸತೀಶ್, ಮಹಿಳಾ ಸಬ್ ಇನ್ಸ್ಪೆಕ್ಟರ್ ಹಾಗೂ ಒರ್ವ ಮಹಿಳೆಯ ತಂಡ ಕೇರಳದಿಂದ ಸಂತ್ರಸ್ತೆಯನ್ನು ಕರೆದುಕೊಂಡು ಬರುತ್ತಿದ್ದಾರೆ ಎಂದು ವರದಿಯಾಗಿದೆ.