– ಕೋಲಾರದಲ್ಲೂ ವೃದ್ಧ ಬಲಿ?
ಬೆಂಗಳೂರು: ಎದೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಇಂದು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
54 ವರ್ಷದ ಬೆಂಗಳೂರಿನ ನಾಗರಬಾವಿ ನಿವಾಸಿಗೆ ಸೋಮವಾರ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಅವರು ಮೃತಪಟ್ಟಿದ್ದಾರೆ. ನಿಧನರಾದ ಬಳಿಕ ವ್ಯಕ್ತಿಯ ಸ್ವಾಬ್ ಟೆಸ್ಟ್ ಮಾಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
Advertisement
Advertisement
ಇತ್ತ ಕೋಲಾರದಲ್ಲಿ ಕೂಡ ಮಹಾರಾಷ್ಟ್ರ ಮೂಲದ ವೃದ್ಧ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಮಹಾರಾಷ್ಟ್ರ ಮೂಲದ 60 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದಿಂದ ತರಕಾರಿ ಸಾಗಾಣಿಕೆ ಟ್ರಕ್ ನಲ್ಲಿ ಬಂದಿದ್ದ ವೃದ್ಧ ಮಹಾರಾಷ್ಟ್ರದಿಂದ ಬೆಂಗಳೂರು ಮೂಲಕ ಮಾಲೂರಿಗೆ ಆಗಮಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ಟ್ರಕ್ ಮೂಲಕ ಮಾಲೂರಿನಿಂದ ಒರಿಸ್ಸಾ ಹೋಗಿದ್ದ ಮೃತ ವ್ಯಕ್ತಿ ಒರಿಸ್ಸಾದಿಂದ ಮುಳಬಾಗಿಲು, ಕೋಲಾರ ಮೂಲಕ ಸೋಮವಾರ ಸಂಜೆ ಮಾಲೂರಿಗೆ ಮತ್ತೆ ವಾಪಸ್ಸಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ನಿನ್ನೆ ರಾತ್ರಿ 11 ಗಂಟೆಗೆ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Advertisement
Advertisement
ಮೃತ ವ್ಯಕ್ತಿಯಲ್ಲಿ ಕೊರೊನಾ ಶಂಕೆ ವ್ಯಕ್ತಪಡಿಸಿದ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆಸ್ಪತ್ರೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮೃತ ವ್ಯಕ್ತಿಯ ಗಂಟಲು ದ್ರವ್ಯವನ್ನು ತೆಗೆದುಕೊಂಡಿದ್ದಾರೆ. ಈಗಾಗಲೇ ಆಸ್ಪತ್ರೆ ವೈದ್ಯರು ಸೇರಿದಂತೆ 5 ಜನರನ್ನ ಹೋ ಕ್ವಾರಂಟೈನ್ ಮಾಡಿದ್ದು, ಆಸ್ಪತ್ರೆ ಸುತ್ತಮುತ್ತ ಸ್ಯಾನಿಟೈಸರ್ ಸಿಂಪಡಿಸಿದ್ದಾರೆ.