– ಪ್ಯಾಕೇಜ್ ಘೋಷಿಸಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸ್ಬಾರ್ದು
ಬೆಂಗಳೂರು: ಕೆಲವೇ ಪ್ರದೇಶಗಳಲ್ಲಿ ಸೀಲ್ಡೌನ್, ಲಾಕ್ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ ಲಾಕ್ಡೌನ್ ಮಾಡಿ ಎಂದು ಕೆಲ ಏರಿಯಾಗಳ ಸೀಲ್ಡೌನ್ಗೆ ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆ.ಆರ್. ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸಿದ್ದಾಪುರ ವಾರ್ಡ್, ವಿವಿಪುರಂ, ಕಲಾಸಿ ಪಾಳ್ಯಗಳಲ್ಲಿ, ಪ್ರಕರಣ ವರದಿಯಾದ ಅಕ್ಕಪಕ್ಕದ ಬೀದಿಗಳು ಸೇರಿದಂತೆ ಸೀಲ್ಡೌನ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.
2/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 23, 2020
Advertisement
ಮೊದಲಿಗೆ “ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ಡೌನ್, ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕಷ್ಟ 20 ದಿನ ಸಂಪೂರ್ಣ ಲಾಕ್ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ” ಎಂದು ಸರ್ಕಾರದ ನಿರ್ಧಾರ ವಿರುದ್ಧ ಆಕ್ರೋಶಕೊಂಡು ಟ್ವೀಟ್ ಮಾಡಿದ್ದಾರೆ.
Advertisement
Advertisement
“ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ” ಎಂದಿದ್ದಾರೆ.
“ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.