ಬೆಂಗ್ಳೂರು ಸಂಪೂರ್ಣ ಸ್ತಬ್ಧ- ರಸ್ತೆಗಳು ಖಾಲಿ ಖಾಲಿ

Public TV
1 Min Read
bandh copy

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಇದೇ ಮೊದಲ ಸಂಡೇ ಲಾಕ್‍ಡೌನ್ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಮಲ್ಲೇಶ್ವರಂ, ತುಮಕೂರು, ಮೈಸೂರು ರಸ್ತೆ ಸೇರಿದಂತೆ ಬೆಂಗಳೂರಿನ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ.

ಬಳ್ಳಾರಿ ರೋಡ್ ಮತ್ತು ಮೇಕ್ರಿ ಸರ್ಕಲ್ ಸುತ್ತಮುತ್ತ ರಸ್ತೆಗಳು ಫುಲ್ ಖಾಲಿ ಖಾಲಿಯಾಗಿವೆ. ಪ್ರಮುಖ ಪ್ಲೈಓವರ್‌ಗೆ ಬ್ಯಾರಿಕೇಡ್ ಹಾಕಿ ಪೊಲೀಸರು ಮುಚ್ಚಿದ್ದಾರೆ. ಹೀಗಾಗಿ ರಸ್ತೆಗಳು ಖಾಲಿ ಖಾಲಿ ಇರುವುದರಿಂದ ಹೆಬ್ಬಾಳದ ರಸ್ತೆ ಬದಿಯಲ್ಲಿ ಜನರು ವಾಕಿಂಗ್ ಮಾಡುತ್ತಿದ್ದಾರೆ.

vlcsnap 2020 07 05 07h18m38s64

ಇನ್ನೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸಂಪೂರ್ಣ ನಿಶಬ್ಧವಾಗಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳು ಫುಲ್ ಖಾಲಿ ಖಾಲಿಯಾಗಿವೆ. ಮೆಜೆಸ್ಟಿಕ್‍ನಲ್ಲಿ ಆಟೋಗಳ ಸಂಚಾರ ಹೊರತು ಪಡಿಸಿದರೆ ಬೇರೆ ವಾಹನಗಳ ಓಡಾಟ ಸಂಪೂರ್ಣ ಬಂದ್ ಆಗಿದೆ. ಇಂದಿನಿಂದ ನಾಳೆ ಬೆಳಗ್ಗೆಯ ತನಕ ಲಾಕ್‍ಡೌನ್ ವಿಚಾರ ತಿಳಿದು ಮೆಜೆಸ್ಟಿಕ್ ಕಡೆ ಪ್ರಯಾಣಿಕರು ಬರುತ್ತಿಲ್ಲ.

vlcsnap 2020 07 05 07h18m06s22

ಮಲ್ಲೇಶ್ವರಂನಲ್ಲಿ ಹಾಲು ಮಾರಾಟಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಮಲ್ಲೇಶ್ವರಂ ಮುಖ್ಯ ರಸ್ತೆಗಳು ಖಾಲಿ ಖಾಲಿಯಾಗಿವೆ. ಆದರೆ ದ್ವಿಚಕ್ರ ವಾಹನದಲ್ಲಿ ಜನರು ಓಡಾಡುತ್ತಿದ್ದಾರೆ. ಸಂಡೇ ಕರ್ಫ್ಯೂ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಆದೇಶ ಹೊರಡಿಸಿದ್ದು, ನಗರದ ದೇವಾಲಯಗಳು ಕೂಡ ಬಂದ್ ಆಗಿದೆ. ಮಲ್ಲೇಶ್ವರಂನ ಸಾಯಿ ಬಾಬಾ ದೇವಾಲಯ ಬಂದ್ ಆಗಿದೆ. ಆದರೆ ಗುರು ಪೂರ್ಣಮಿ ಹಿನ್ನೆಲೆಯಲ್ಲಿ ಸಾಯಿ ಬಾಬಾ ದರ್ಶನಕ್ಕೆ ಬಂದ ಭಕ್ತಾಧಿಗಳು ರಸ್ತೆಯಲ್ಲೇ ನಮಸ್ಕಾರ ಮಾಡಿ ವಾಪಸ್ ಹೋಗುತ್ತಿದ್ದಾರೆ.

vlcsnap 2020 07 05 07h18m02s234

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‍ಗಳ ಸಂಚಾರ ನಿಷೇಧ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಸೆಟಲೈಟ್ ಫುಲ್ ಖಾಲಿ ಖಾಲಿಯಗಿದೆ. ನಿಲ್ದಾಣದಲ್ಲಿ ಬ್ಯಾರಿಕೇಡ್‍ನಿಂದ ಕ್ಲೋಸ್ ಮಾಡಲಾಗಿದೆ. ಇತ್ತ ಮೈಸೂರು ರಸ್ತೆ ಕೂಡ ಫುಲ್ ಖಾಲಿ ಖಾಲಿಯಾಗಿದೆ. ಮಾಗಡಿ ರೋಡ್ ಕೂಡ ಸಂಪೂರ್ಣ ಸ್ತಬ್ಧವಾಗಿದೆ.

ಸದಾ ವಾಹನ ಸಂಚಾರದಿಂದ ಟ್ರಾಫಿಕ್ ಜಾಮ್ ಆಗುತ್ತಿದ್ದ ತುಮಕೂರು ರಸ್ತೆ ಭಾನುವಾರ ಲಾಕ್‍ಡೌನ್ ಹಿನ್ನೆಲೆಯಲ್ಲಿ ಖಾಲಿ ಖಾಲಿಯಾಗಿದೆ. ಬೆರೆಳೆಣಿಕೆಯಷ್ಟು ವಾಹನಗಳು ಸಂಚಾರ ಬಿಟ್ಟರೆ ಬಹುತೇಕ ರಸ್ತೆ ಖಾಲಿ ಇದೆ. ಗೊರಗೊಂಟೆಪಾಳ್ಯದ ಫ್ಲೈ ಓವರ್ ಕ್ಲೋಸ್ ಮಾಡಲಾಗಿದೆ.

Share This Article