Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ: ಸಿದ್ದರಾಮಯ್ಯ

Bengaluru City

ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ: ಸಿದ್ದರಾಮಯ್ಯ

Public TV
Last updated: June 17, 2021 7:29 pm
Public TV
Share
2 Min Read
siddaramaiah
SHARE

ಬೆಂಗಳೂರು: ಬಿಜೆಪಿಯ ಭಿನ್ನಮತೀಯ ಶಾಸಕನ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಂದ ಆಗ್ರಹಿಸಿದ್ದಾರೆ.

ಬಿಜೆಪಿಯ ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ ಅವರು ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು. ಈ ಆರೋಪವನ್ನು ತಿಪ್ಪೆ ಸಾರಿಸುವ ಸ್ಪಷ್ಟೀಕರಣದ ಮೂಲಕ ಮುಚ್ಚಿಹಾಕುವ ಪ್ರಯತ್ನ ಮಾಡದೆ ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

aravind Bellad 2 1 medium

ಫೋನ್ ಟ್ಯಾಪಿಂಗ್ ಆಗುತ್ತಿರುವುದನ್ನು ಬಹಿರಂಗಪಡಿಸುವ ಧೈರ್ಯ ತೋರಿದ ಶಾಸಕ ಅರವಿಂದ್ ಬೆಲ್ಲದ್ ಅವರನ್ನು ಅಭಿನಂದಿಸುತ್ತೇನೆ. ಇದು ಕೇವಲ ಬೆಲ್ಲದರೊಬ್ಬರ ಫೋನ್ ಗೆ ಸಂಬಂಧಿಸಿದ್ದಾಗಿರಲಿಕ್ಕಿಲ್ಲ, ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರೆಂದು ಗುರುತಿಸಿಕೊಂಡಿರುವ ಇತರ ಶಾಸಕರು ಮಾತ್ರವಲ್ಲ ವಿರೋಧಪಕ್ಷದ ನಾಯಕರ ಫೋನ್ ಗಳ ಕದ್ದಾಲಿಕೆಯೂ ನಡೆದಿರುವ ಎಲ್ಲ ಸಾಧ್ಯತೆಗಳೂ ಇವೆ.

Aravind Bellad Letter 1 medium

ರಾಜ್ಯ ಬಿಜೆಪಿಯ ಭಿನ್ನಮತೀಯ ನಾಯಕರಿಂದ ಮುಖ್ಯಮಂತ್ರಿಗಳನ್ನು ಪದಚ್ಯುತಿಗೊಳಿಸುವ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲಿಯೇ ಇಂತಹದ್ದೊಂದು ಆರೋಪ ವ್ಯಕ್ತವಾಗಿದೆ. ಅರವಿಂದ್ ಬೆಲ್ಲದ್ ಅವರು ಭಿನ್ನಮತೀಯರ ಜೊತೆ ಗುರುತಿಸಿಕೊಂಡಿರುವ ಪ್ರಮುಖ ಶಾಸಕರೂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಪದ ಗುರಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಗಿರುತ್ತಾರೆ. ಬೆಲ್ಲದ್ ಅವರ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆ ನಡೆಸಿದರೂ ಅದರಿಂದ ಸತ್ಯ ಸಂಗತಿ ಖಂಡಿತ ಹೊರಬರಲಾರದು. ಆದ್ದರಿಂದ ಈ ತನಿಖೆಯನ್ನು ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದಲೇ ನಡೆಸುವುದು ಸೂಕ್ತವಾಗಿದೆ. ಬೆಲ್ಲದ ಅವರು ತನ್ನ ಆರೋಪದಲ್ಲಿ ಈಗಾಗಲೇ ಜೈಲಲ್ಲಿರುವ ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರ ಒಡನಾಡಿಯಾಗಿದ್ದ ಯುವರಾಜ ಸ್ವಾಮಿ ಎಂಬ ವ್ಯಕ್ತಿಯ ಹೆಸರೂ ಪ್ರಸ್ತಾಪವಾಗಿದೆ. ಈ ಬಗ್ಗೆಯೂ ತನಿಖೆಯಾಗಬೇಕಾಗಿದೆ.

Aravind Bellad Letter 3 medium

ಫೋನ್ ಗಳನ್ನು ಕದ್ದಾಲಿಸುವ ಹತಾಶ ಸ್ಥಿತಿಗೆ ಮುಖ್ಯಮಂತ್ರಿಗಳು ಇಳಿದಿರುವುದು ಪಕ್ಷದ ಶಾಸಕರ ವಿಶ್ವಾಸವನ್ನು ಅವರು ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆ. ಹಣದ ಆಮಿಷವೊಡ್ಡಿ ಅಡ್ಡಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ತನ್ನ ಆಸೆ ತೀರಿಸಿಕೊಂಡ ಬಿ.ಎಸ್.ಯಡಿಯೂರಪ್ಪನವರಿಗೆ ಮುಖ್ಯಮಂತ್ರಿಯಾದಾಗಲೂ ಶಾಸಕರ ಬೆಂಬಲ ಇರಲಿಲ್ಲ, ಈಗಲೂ ಇಲ್ಲ. ಇದನ್ನೂ ಓದಿ: ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

Aravind Bellad Letter 4 medium

ಇಡೀ ರಾಜ್ಯ ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವಾಗಲೇ ಆಡಳಿತಾರೂಢ ಬಿಜೆಪಿಯ ನಾಯಕರು ಬೀದಿಬೀದಿಗಳಲ್ಲಿ ಕಚ್ಚಾಟಕ್ಕೆ ಇಳಿದಿರುವುದು ನೋಡಿದರೆ ಇವರಿಗೆ ಅಧಿಕಾರದ ಲಾಲಸೆ ಮಾತ್ರ ಇದೆ ಹೊರತು ರಾಜ್ಯದ ಜನರ ಹಿತರಕ್ಷಣೆಯ ಕಾಳಜಿ ಕಿಂಚಿತ್ತೂ ಇಲ್ಲ ಎನ್ನುವುದು ಸಾಬೀತಾಗಿದೆ. ಭಿನ್ನಮತೀಯ ಚಟುವಟಿಕೆಗಳಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಬ್ಧವಾಗಿದೆ.ಈ ಪರಿಸ್ಥಿವತಿಯನ್ನು ಘನತೆವೆತ್ತ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಈ ಜನದ್ರೋಹಿ ಸರ್ಕಾರವನ್ನು ವಜಾಮಾಡಬೇಕು ಎಂದು ಆಗ್ರಹಪಡಿಸುತ್ತೇನೆ.

ಪೋನ್ ಕದ್ದಾಲಿಕೆಯ ಆರೋಪದ ಗುರಿ @CMofKarnataka ಅವರೇ ಆಗಿರುವುದರಿಂದ ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆಯಿಂದ ತನಿಖೆ ನಡೆಸಿದರೂ ಸತ್ಯ ಸಂಗತಿ ಹೊರಬರಲಾರದು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ತನಿಖೆಯೇ ಸೂಕ್ತ.#NoTrustWithinBJP
2/7 pic.twitter.com/uf0cEV7DqN

— Siddaramaiah (@siddaramaiah) June 17, 2021

ಬೆಲ್ಲದ್ ಆರೋಪವೇನು?: ಯುವರಾಜ ಸ್ವಾಮಿ ಕಾಲ್ ಹಿಂದೆ ಷಡ್ಯಂತ್ರ ಇದೆ. ನಮ್ಮ ತಂದೆ ಚಂದ್ರಕಾಂತ್ ಬೆಲ್ಲದ್ 5 ಬಾರಿ ಶಾಸಕರಾಗಿದ್ದರು. ಕಪ್ಪು ಚುಕ್ಕಿ ಇಲ್ಲದೆ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ನಾನು ಅದೇ ಮಾರ್ಗದಲ್ಲಿ ಹೋಗುತ್ತಿದ್ದೇನೆ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತೆ. ನನ್ನ ಫೋನ್ ಕೂಡ ಟ್ಯಾಪ್ ಆಗಿದೆ. ಈ ಸಂಬಂಧ ಸ್ಪೀಕರ್ ಹಾಗೂ ಗೃಹ ಸಚಿವರಿಗೆ ಡಿಜಿಗೆ ಪತ್ರ ಕೊಟ್ಟಿದ್ದೇನೆ ಎಂದು ಹೇಳುತ್ತಾ ಬೆಲ್ಲದ್ ಅವರು ಪತ್ರವನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್-ಸ್ಪೀಕರ್, ಗೃಹ ಸಚಿವರಿಗೆ ದೂರು 

TAGGED:Arvind Belladbjpbs yeddyurappacongressiddaramaiahPhone TappingPublic TVಅರವಿಂದ್ ಬೆಲ್ಲದ್ಕಾಂಗ್ರೆಸ್ಪಬ್ಲಿಕ್ ಟಿವಿಫೋನ್ ಟ್ಯಾಪಿಂಗ್ಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
6 minutes ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
39 minutes ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
39 minutes ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
60 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
1 hour ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?