ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಪಡೆದು ಅಜ್ಞಾತವಾಗಿದ್ದ ಸಂಜನಾ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಹೈಕೋರ್ಟ್ನಿಂದ ಜಾಮೀನು ಪಡೆದಿದ್ದ ಸಂಜನಾ ಐದು ದಿನಗಳ ಬಳಿಕ ಕಾಣಿಸಿಕೊಂಡಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಇಂದು ಎನ್ಡಿಪಿಎಸ್ ಕೋರ್ಟ್ ಸಂಜನಾ ಹಾಜರಾಗಿದ್ದರು.
Advertisement
Advertisement
ಜಾಮೀನು ಪ್ರಕ್ರಿಯೆ ಮುಗಿಸಿಲು ಸಿಟಿ ಸಿವಿಲ್ ಕೋರ್ಟ್ಗೆ ಸಂಜನಾ ಇಂದು ಆಗಮಿಸಿದ್ದರು. ಕೋರ್ಟ್ ಹಾಲ್ಗೆ ಹೋಗುವ ಮುನ್ನ ಸಂಜನಾಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ನೆಗೆಟಿವ್ ರಿಪೋರ್ಟ್ ಬಂದ ನಂತರ ಎನ್ಡಿಪಿಎಸ್ ಜಡ್ಜ್ ಮುಂದೆ ಸಂಜನಾ ಹಾಜರಾದರು. ಬುರ್ಕಾವನ್ನು ಧರಿಸಿ ಸಂಜನಾ ಕೋರ್ಟ್ಗೆ ಹಾಜರಾಗಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಬಲವಂತದಿಂದ ಇಸ್ಲಾಂಗೆ ಸಂಜನಾ ಮತಾಂತರ
Advertisement
ಸ್ಯಾಂಡಲ್ವುಡ್ ಡ್ರಗ್ ದಂಧೆ ಪ್ರಕರಣ ಸಂಬಂಧ ಜೈಲುಪಾಲಾಗಿದ್ದ ನಟಿ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಡಿ.11 ರಂದು ಜಾಮೀನು ಮಂಜೂರು ಮಾಡಿತ್ತು. ಅನಾರೋಗ್ಯದಿಂದ ಬಳಲುತ್ತಿರುವ ಗಲ್ರಾನಿಗೆ ಶಸ್ತ್ರ ಚಿಕಿತ್ಸೆ ಮಾಡುವ ಅಗತ್ಯವಿದೆ ಎಂದು ವಾಣಿ ವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್ ಗೆ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ನೀಡಿತ್ತು.
Advertisement
ಸೆಪ್ಟೆಂಬರ್ 8 ರಂದು ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ವಿಚಾರಣೆಗೆ ಕರೆದು, ನಂತರ ಬಂಧಿಸಿದ್ದರು. ಸಿಸಿಬಿ ವಿಚಾರಣೆಯ ಬಳಿಕ ಸಂಜನಾ ನ್ಯಾಯಾಂಗ ಬಂಧನದಲ್ಲಿದ್ದರು.