Connect with us

Districts

ಬೈಕ್ ಡಿಕ್ಕಿ – ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಸಾವು

Published

on

ಕೋಲಾರ: ಎರಡು ಬೈಕ್‍ಗಳ ನಡುವೆ ನಡೆದ ಅಪಘಾತದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯ ಎಎಸ್‍ಐ ಮಂಜುನಾಥ್ (52) ಮೃತಪಟ್ಟವರು. ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಕರ್ತವ್ಯಕ್ಕೆ ತೆರಳುವ ವೇಳೆ ಎದುರಿಗೆ ಬಂದ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಎಎಸ್‍ಐ ಸಾವನ್ನಪ್ಪಿದ್ದಾರೆ.

ಬುಧವಾರ ರಾತ್ರಿ ಕೋಲಾರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *