– 24 ಗಂಟೆಯಲ್ಲಿ 5,611 ಹೊಸ ಪ್ರಕರಣ ಪತ್ತೆ, 140 ಸಾವು
– ಈವರೆಗೆ 3,303 ಮಂದಿ ಮಹಾಮಾರಿಗೆ ಬಲಿ
ನವದೆಹಲಿ: ಭಾರತದಲ್ಲಿ ಕೊರೊನಾ ರೌದ್ರತರ್ನಕ್ಕೆ ಈವರೆಗೆ 3,303 ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 5,611 ಹೊಸ ಪ್ರಕರಣಗಳು ಪತ್ತೆ ಹಾಗೂ 140 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
Advertisement
ಈವರೆಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು 42,309 ಮಂದಿ ಗುಣಮುಖರಾಗಿದ್ದಾರೆ. 61,194 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಹರಡಿದ್ದು, ಈವರೆಗೆ 37,136 ಮಂದಿ ಸೋಂಕಿಗೆ ತುತ್ತಾಗಿದ್ದು, 1,325 ಮಂದಿ ಕೊರೊನಾಗೆ ಬಲಿಯಾಗಿದ್ದು, 9,639 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
Advertisement
Highest ever spike of 5,611 #COVID19 cases & 140 deaths in the last 24 hours. Total number of cases in the country now at 106750, including 61149 active cases & 3303 deaths: Ministry of Health and Family Welfare pic.twitter.com/kj95C6b8Is
— ANI (@ANI) May 20, 2020
Advertisement
ಸೋಂಕು ಅತೀ ಹೆಚ್ಚು ಹರಡಿರುವ ರಾಜ್ಯಗಳಲ್ಲಿ ತಮಿಳುನಾಡು ಎರಡನೇ ಸ್ಥಾನದಲ್ಲಿದ್ದು, ಈವರೆಗೆ 12,448 ಮಂದಿಗೆ ಕೊರೊನಾ ತಗುಲಿದ್ದು, 85 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇತ್ತ ಗುಜರಾತ್ನಲ್ಲಿ 12,141 ಮಂದಿ ಸೋಂಕಿಗೆ ತುತ್ತಾಗಿದ್ದು, 719 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10,554 ಮಂದಿ ಕೊರೊನಾಗೆ ತುತ್ತಾಗಿದ್ದು, 166 ಮಂದಿ ಮೃತಪಟ್ಟಿದ್ದಾರೆ. ಸುಮಾರು 4,750 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
Advertisement
ರಾಜಸ್ಥಾನದಲ್ಲಿ 5,845 ಮಂದಿಗೆ ಸೋಂಕು ತಗುಲಿದ್ದು, 143 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದಲ್ಲಿ 5,465 ಮಂದಿ ಸೋಂಕಿಗೆ ತುತ್ತಾಗಿದ್ದು, 258 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 4,926ಕ್ಕೆ ಏರಿಕೆಯಾಗಿದ್ದು, 123 ಮಂದಿ ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದಲ್ಲಿ 2,489 ಮಂದಿಗೆ ಸೋಂಕು ತಗುಲಿದ್ದು, 52 ಮಂದಿ ಸಾವನ್ನಪ್ಪಿದ್ದಾರೆ. 1,621 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,634 ಮಂದಿ ಕೊರೊನಾಗೆ ತುತ್ತಾಗಿದ್ದು, 38 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 643 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 497 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಕರ್ನಾಟಕದಲ್ಲಿ ಈವರೆಗೆ 1,395 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 40ಕ್ಕೆ ಏರಿದೆ. ಒಟ್ಟು 543 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಮಂಗಳವಾಋ ಒಂದೇ ದಿನ ರಾಜ್ಯದಲ್ಲಿ 149 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.