– 24 ಗಂಟೆಯಲ್ಲಿ 120 ಮಂದಿ ಸಾವು
– ಮಹಾರಾಷ್ಟ್ರ ಒಂದರಲ್ಲೇ 30 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿ
ನವದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ 90,927 ಮಂದಿಗೆ ಸೋಂಕು ತಗುಲಿದ್ದು, 2,872 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ.
#COVID19: 120 deaths have occurred in the last 24 hours, Ministry of Health and Family Welfare https://t.co/GLgYHOHWyj
— ANI (@ANI) May 17, 2020
Advertisement
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,987 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 120 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು 34,109 ಮಂದಿ ಗುಣಮುಖರಾಗಿದ್ದಾರೆ. 53,946 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಹರಡಿದ್ದು, ಈವರೆಗೆ 30,706 ಮಂದಿ ಸೋಂಕಿಗೆ ತುತ್ತಾಗಿದ್ದು, ಮುಂಬೈ ಒಂದರಲ್ಲೇ 18,555 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. 1,135 ಮಂದಿ ಕೊರೊನಾಗೆ ಬಲಿಯಾಗಿದ್ದು, 7,088 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
Advertisement
Advertisement
ಗುಜರಾತ್ನಲ್ಲಿ 10,986 ಮಂದಿ ಸೋಂಕಿಗೆ ತುತ್ತಾಗಿದ್ದು, 625 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 10,585 ಮಂದಿಗೆ ಕೊರೊನಾ ತಗುಲಿದ್ದು, 74 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 9,333 ಮಂದಿ ಕೊರೊನಾಗೆ ತುತ್ತಾಗಿದ್ದು, 129 ಮಂದಿ ಮೃತಪಟ್ಟಿದ್ದಾರೆ. ಸುಮಾರು 3,926 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
Advertisement
ಆಂಧ್ರಪ್ರದೇಶದಲ್ಲಿ 2,355 ಮಂದಿಗೆ ಸೋಂಕು ತಗುಲಿದ್ದು, 49 ಮಂದಿ ಸಾವನ್ನಪ್ಪಿದ್ದಾರೆ. 1,353 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,509 ಮಂದಿ ಕೊರೊನಾಗೆ ತುತ್ತಾಗಿದ್ದು, 34 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 588 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 497 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ 1,092 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 36ಕ್ಕೆ ಏರಿದೆ. ಒಟ್ಟು 496 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.