ಬೆಂಗಳೂರು: ಟೆಂಪೋ-ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ (Accident) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ (Hosakote) ತಾಲೂಕಿನ ಚಿಕ್ಕಹುಲ್ಲೂರು ಬಳಿ ತಡರಾತ್ರಿ ನಡೆದಿದೆ.
ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಚಿಕ್ಕಹುಲ್ಲೂರು ಘಟನೆ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಲಾರಿಗೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಇನ್ನೋವಾ – ಮೂವರು ಸ್ಥಳದಲ್ಲೇ ಸಾವು
ಟೆಂಪೋ ಡಿಕ್ಕಿ ಹೊಡೆದ ರಭಸಕ್ಕೆ ವಾಹನ ದ್ವಿಚಕ್ರವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್ ಉಪಗ್ರಹ – ಡ್ರೋನ್ ಅಂತ ಬೆಚ್ಚಿದ ಜನ